spot_img
Tuesday, March 17, 2026
spot_img

ಮಂಗಳೂರಿನಲ್ಲಿ ಅ.5ರಂದು ‘ವಿಹಂಗಮ’ ಕರ್ನಾಟಕೀ ಮತ್ತು ಹಿಂದೂಸ್ತಾನೀ ಜುಗಲ್ ಬಂಧಿ

ಮಂಗಳೂರು: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ವಿಹಂಗಮ  ಎಂಬ ‘ಕರ್ನಾಟಕೀ ಮತ್ತು ಹಿಂದೂಸ್ತಾನೀ ಜುಗಲ್ ಬಂಧಿ’ ಕಾರ್ಯಕ್ರಮವನ್ನು ಅಕ್ಟೋಬರ್ 05 ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ 05.30ಕ್ಕೆ ನಡೆಯಲಿದೆ.

ವಿಹಂಗಮ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಇಬ್ಬರು ಕಲಾವಿದರಾದ ವಿದ್ವಾನ್ ಡಾ.ಮೈಸೂರು ಮಂಜುನಾಥ್ ಮತ್ತು ಉಸ್ತಾದ್ ರಫೀಕ್ ಖಾನ್ ಇವರಿಂದ ‘ವಯೋಲಿನ್-ಸಿತಾರ್ ಜುಗಲ್ ಬಂದಿ’ ನಡೆಯಲಿದೆ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಮೃದಂಗದಲ್ಲಿ ಚೆನ್ನೈನ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಮತ್ತು ತಬ್ಲಾದಲ್ಲಿ ಮುಂಬೈನ ಶ್ರೀ ಓಜಸ್ ಅಧಿಯಾ ಅವರು ಸಾಥ್ ನೀಡಲಿದ್ದಾರೆ. ಮಂಗಳೂರು ನಗರದ ಪೆÇೀಲಿಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರಿನ ಜನತೆಗೆ ಇದೀಗ ಶ್ರೇಷ್ಠಮಟ್ಟದ ವಯೋಲಿನ್-ಸಿತಾರ್ ಜುಗಲ್ ಬಂಧಿ ಕೇಳುವ ಅವಕಾಶ ದೊರೆತಿದೆ. ತಮ್ಮದೇ ಕ್ಷೇತ್ರದಲ್ಲಿ ವಿಶ್ವಖ್ಯಾತಿ ಪಡೆದ ಕಲಾವಿದರು ಪರಸ್ಪರ ಒಂದಾಗಿ ಒಂದೇ ವೇದಿಕೆಯಲ್ಲಿ ತಮ್ಮ ವಾದನದ ನೈಪುಣ್ಯತೆಯನ್ನು ಜನರ ಮುಂದೆ ಪ್ರಸ್ತುತ ಪಡಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತರೆಲ್ಲರಿಗೂ ಮುಕ್ತ ಪ್ರವೇಶಾವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಡಾ. ಉಷಾಪ್ರಭಾ ಎನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಈ ಕಾರ್ಯಕ್ರಮಕ್ಕೆ ಮುಖ್ಯ ಪ್ರಾಯೋಜಕತ್ವವನ್ನು ವಹಿಸಿದ್ದು ಈ ಕಾರ್ಯಕ್ರಮಕ್ಕೆ ‘ವಿಹಂಗಮ’ ಎಂದು ಹೆಸರಿಡಲಾಗಿದ್ದು, ಬೆಂಗಳೂರಿನ ಸೆಂಚುರಿ ಗ್ರೂಪ್‍ನ ಅಧ್ಯಕ್ಷರಾದ ‘ಡಾ.ಪಿ.ದಯಾನಂದ ಪೈ’ಸಹಪ್ರಾಯೋಜಕರಾಗಿ ಸಹಕರಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಗೀತ ಭಾರತಿ ಪ್ರತಿಷ್ಠಾನದ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್, ಖಜಾಂಚಿ ಕರುಣಾಕರ ಬಳ್ಕೂರು, ಟ್ರಸ್ಟಿಗಳಾದ ಶ್ರೀ ಮುರುಳೀಧರ್ ಜಿ ಶೆಣೈ, ಡಾ.ರಮೇಶ್ ಕೆ ಜಿ ಹಾಗೂ ಅಂಕುಶ್ ಎನ್ ನಾಯಕ್ ಅವರು ಉಪಸ್ಥಿತರಿದ್ಧರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!