spot_img
Thursday, March 12, 2026
spot_img

ಎಸ್‌ಡಿ‌ಎಂಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾ ಮಟ್ಟದ ಗುರುವಂದನೆಗೆ ಶಿಕ್ಷಣ ಕ್ಷೇತ್ರದ ಸಾಧಕ ಡಾ.ಅಶೋಕ್ ಕಾಮತ್ ಆಯ್ಕೆ

ಕುಂದಾಪುರ: ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ರಿ. ಉಡುಪಿ ಜಿಲ್ಲಾ ಘಟಕವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡುವ ೨೦೨೫-೨೬ ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್‌ಡಿ‌ಎಂಸಿ ಅಧ್ಯಕ್ಷ ಪ್ರಶಸ್ತಿ, ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್‌ಡಿ‌ಎಂಸಿ, ಮತ್ತು ಸರಕಾರಿ ಶಾಲೆ ಹಾಗೂ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ, ಹಾಗೂ ಜಿಲ್ಲಾ ಘಟಕದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಕೋಟೇಶ್ವರದ ರಥಬೀದಿಯಲ್ಲಿರುವ ಶಾರದಾ ಕಲ್ಯಾಣ ಮಂಟಪದ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಂಡಿತು.

ಗೀತಾ ಎಚ್.ಎಸ್.ಎನ್ ಫೌಂಡೇಶನ್‌ನ ಕೋಶಾಧಿಕಾರಿ ರಾಮ ಅಡಿಗ ಉದ್ಘಾಟಿಸಿ ಶುಭ ಹಾರೈಸಿದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಅತ್ಯುತ್ತಮ ಎಸ್.ಡಿ.ಎಂ.ಸಿ ಮತ್ತು ಸರಕಾರಿ ಶಾಲೆ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆಗೊಳಿಸಿದ ಕೋಟೇಶ್ವರ ಗೀತಾ ಹೆಚ್.ಎಸ್.ಎನ್ ಫೌಂಡೇಶನ್‌ನ ಅಧ್ಯಕ್ಷ, ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹಾಪೋಷಕ ಶಂಕರ್ ಐತಾಳ್ ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಅಥವಾ ಸಂಸ್ಥೆಗೆ ಸಮಯದ ಪಾಲನೆ ಅತ್ಯಗತ್ಯ. ಕಳೆದ ಸಮಯ ಬಳಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಸಮಯದ ಪ್ರಜ್ಞೆ ಜೀವನದಲ್ಲಿ ಪ್ರಮುಖ. ಎಸ್.ಡಿ.ಎಂ.ಸಿ ವೇದಿಕೆಯ ಸಮಾಜಸೇವೆ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ (ರಿ) ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ವಹಿಸಿದ್ದರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ, ಪ್ರಭಾರ ವಿದ್ಯಾಂಗ ಉಪ ನಿರ್ದೇಶಕರಾಗಿ, ಪ್ರಸ್ತುತ ಡಯಟ್ ಪ್ರಿನ್ಸಿಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಅಶೋಕ್ ಕಾಮತ್ ಅವರಿಗೆ ಗುರುವಂದನೆ ಸಲ್ಲಿಸಲಾಗುತ್ತದೆ.

ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಶಸ್ತಿಯನ್ನು ಹೆಸ್ಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೃಷ್ಣ ಕೆದಲಾಯ, ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ ಶಿಕ್ಷಕ ಪ್ರಶಸ್ತಿಯನ್ನು ಡಾ.ಕಿಶೋರ್ ಕುಮಾರ್ ಶೆಟ್ಟಿ, ಮೋಹನ್ ಕಡಬ, ತನುಜಾಕ್ಷಿ, ತಾರದೇವಿ, ವೆಂಕಟ, ರೋಶನ್ ಬೀಬಿ, ಜಯಶ್ರೀ, ರವಿ ಎಸ್.ಪೂಜಾರಿ, ಬಾಲಕೃಷ್ಣ ಶೆಟ್ಟಿ, ವಸಂತಿ ದಾಸ್. ಜಯ ಮೊಯಲಿ, ಸುಬ್ರಹ್ಮಣ್ಯ ಉಪಾಧ್ಯ ಬಿ., ಕೃಷ್ಣ ನಾಯ್ಕ್, ಆಶಾಲತಾ ಅವರನ್ನು ಅಯ್ಕೆ ಮಾಡಲಾಯಿತು.

ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಮ್.ಸಿ. ಶಾಲೆ ಪ್ರಶಸ್ತಿಯನ್ನು ಕಾಜಾರಗುತ್ತು ಹಿರಿಯ ಪ್ರಾಥಮಿಕ ಶಾಲೆ ಉಡುಪಿ ವಲಯ, ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ವಲಯ, ಮಣೂರು -ಪಡುಕೆರೆ ಸರಕಾರಿ ಸಂಯುಕ್ತ ಪ್ರೌಢಶಾಲೆ ಬ್ರಹ್ಮಾವರ ವಲಯ, ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ವಲಯ, ಮಾವಿನಕಟ್ಟೆ ಸರಕಾರಿ ಪ್ರಾಥಮಿಕ ಶಾಲೆ ಕುಂದಾಪುರ ವಲಯ, ಪೆರ್ವಾಜೆ ಸುಂದರ ಪುರಾಣಿಕ ಸಂಯುಕ್ತ ಪ್ರೌಢಶಾಲೆ ಕಾರ್ಕಳ ವಲಯ ಇವರಿಗೆ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ ಗೌರವ ಸಲಹೆಗಾರರಾದ ಮಲ್ಲಿಕಾ ಬಿ. ಪೂಜಾರಿ , ಹೆಸ್ಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶೇಖರ್, ಕುಂದಾಪುರ ಪುರಸಭಾ ಘಟಕದ ಅಧ್ಯಕ್ಷರಾದ ಅಶ್ವತ್ ಕುಮಾರ್, ಬ್ರಹ್ಮಾವರ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಡುಪಿ ತಾಲೂಕು ಘಟಕದ ಅಧ್ಯಕ್ಷೆ ಉಷಾ ರಮೇಶ್ , ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸಾಧಿಕ್ ಮಾವಿನಕಟ್ಟೆ, ಕಾಪು ತಾಲೂಕು ಉಸ್ತುವಾರಿಗಳಾದ ಅಷ್ಫಾಕ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ ಜಿಲ್ಲಾ ಕಾರ್ಯದರ್ಶಿ ದೀಪಾ ಜಪ್ತಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿ, ಪುರಸಭಾ ಘಟಕದ ಕಾರ್ಯದರ್ಶಿ ವರದಾ ಸುಧಾಕರ್ ಆಚಾರ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!