spot_img
Thursday, March 12, 2026
spot_img

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ:  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ರ ಪ್ರಯುಕ್ತ ಅಕ್ಟೋಬರ್ 2 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆಯನ್ನು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು ಸಂಜೆ 05.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವಾ-ಬೆಳ್ಳಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿ ಕಡೆಯಿಂದ ಬಜ್ಪೆ ಏರ್‍ಪೆÇೀರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವಾ-ಬೆಳ್ಳಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9.00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸಬೇಕು.

ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪುಯಾಣಿಕ ಬಸ್ಸುಗಳು ರಾತ್ರಿ 9.00 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳಿಗೆ ಸಂಜೆ 5.00 ರಿಂದ ರಾತ್ರಿ 10.00 ಗಂಟೆವರೆಗೆ ಸಂಚಾರವನ್ನು ನಿಬರ್ಂಧಿಸಲಾಗಿದೆ.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!