spot_img
Thursday, March 12, 2026
spot_img

ಹೆಮ್ಮಾಡಿ: ಅಗಲಿದ ವಿದ್ಯಾರ್ಥಿಯ ಸಂತಾಪ ಸಭೆ

ಹೆಮ್ಮಾಡಿ : ಇತ್ತೀಚಿಗೆ ನಿಧನ ಹೊಂದಿದ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ನಮೇಶನ ಸಂತಾಪ ಸಭೆಯನ್ನು ಕಾಲೇಜಿನ ವತಿಯಿಂದ ಆಯೋಜಿಸಲಾಯಿತು.

ಸಭೆಯಲ್ಲಿ ಮೃತ ವಿದ್ಯಾರ್ಥಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಮೃತ ವಿದ್ಯಾರ್ಥಿ ತಂದೆ ಲವೇಶ ಮಾತನಾಡಿ, ಕಾಲೇಜಿನ ವತಿಯಿಂದ ಸಂತಾಪ ಸಭೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ ಅವರು, ಮಗನನ್ನು ಕಳೆದುಕೊಂಡ ದುಃಖದಲ್ಲಿ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಲೇಜಿನ ಬಗ್ಗೆ ತಪ್ಪು ಹೇಳಿಕೆ ನೀಡಿದ್ದೇನೆ. ವಿಷಯವನ್ನು ಮನವರಿಕೆ ಮಾಡಿಕೊಂಡ ಮೇಲೆ ಕಾಲೇಜಿನಿಂದ ತಪ್ಪಿಲ್ಲದಿರುವುದು ಅರಿವಾಗಿದೆ. ನನ್ನ ದೊಡ್ಡ ಮಗ ಇದೆ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಪಡೆದಿದ್ದಾನೆ ಎಂದರು.

ಸಂತಾಪ ಸಭೆಯಲ್ಲಿ ಹೆಮ್ಮಾಡಿ ಮೀನುಗಾರರ ಸೇವಾ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ, ಪ್ರಗತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್, ಉದ್ಯಮಿ ಶ್ರೀಕಾಂತ್ ಹೆಮ್ಮಾಡಿ, ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ, ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಆಚಾರಿ, ಸ್ಥಳೀಯರಾದ ಹಸನ್ ಸಾಹೇಬ್, ಪ್ರವೀಣ್ ದೇವಾಡಿಗ ಜನತಾ ಪಿಯು ಹಾಗೂ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಉಪನ್ಯಾಸಕರು ಶಿಕ್ಷಕರು, ನಮೇಶ ನ ಕುಟುಂಬಸ್ಥರು ಊರಿನವರು ಉಪಸ್ಥಿತರಿದ್ದರು.

ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!