spot_img
Monday, March 16, 2026
spot_img

ವಂಡ್ಸೆಯಲ್ಲಿ ‘ಪೋಷಣ್ ಅಭಿಯಾನ್’ ಕಾರ್ಯಕ್ರಮ

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ವಂಡ್ಸೆ ವಲಯ, ಗ್ರಾಮ ಪಂಚಾಯತ್ ವಂಡ್ಸೆ ಹಾಗೂ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಕೋಟ್ಯಾನ್ ಉದ್ಘಾಟಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಸಮತೂಕದ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ ರಾಮ ಅವರು ಮಾತನಾಡಿ, ಗರ್ಬಿಣಿ-ಬಾಣಂತಿಯರು ಮತ್ತು ಮಕ್ಕಳಿಗೆ ಬೇಕಾದ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ, ಹಕ್ಲಾಡಿ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಪೂಜಾರಿ, ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ ಎಸ್. ವಂಡ್ಸೆ, ಸುಬ್ಬು, ಸಂಜೀವಿನಿ ಸಂಘದ ಅಧ್ಯಕ್ಷರಾದ ಸಲ್ಮಾ, ಸ್ತ್ರೀಶಕ್ತಿ ಸಂಘದ ಪದಾಧಿಕಾರಿ ಜುಲೇಖ ಉಪಸ್ಥಿತರಿದ್ದರು,

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು, ವಿದ್ಯಾರ್ಥಿಪೋಷಕರು ಹಾಜರಿದ್ದರು.

ಮೂಕಾಂಬು, ಸುಶೀಲಾ, ರೇಖಾ ಪ್ರಾರ್ಥನೆ ಮಾಡಿದರು. ಮೇಲ್ವಿಚಾರಕಿ ಭಾಗ್ಯವತಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಆತ್ರಾಡಿ ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ಸ್ವಾಗತಿಸಿದರು. ದೀಪಿಕಾ ವಂದಿಸಿದರು. ಶ್ರೀಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಗರ್ಬಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!