spot_img
Wednesday, March 18, 2026
spot_img

ಚಿತ್ತೂರು: ಜ್ಞಾನವಿಕಾಸ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ, ಮಾಹಿತಿ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಚಿತ್ತೂರು ವಲಯದ ಚಿತ್ತೂರು ಒಕ್ಕೂಟದ ಹೊಂಬೆಳಕು ಜ್ಞಾನವಿಕಾಸ ಕೇಂದ್ರದ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಚಿತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಚಂದ್ರಾವತಿ ವಹಿಸಿದ್ದರು. ಬೆಳ್ಳಾಲ ಸರಕಾರಿ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ನಾಗರಾಜ್ ಕೌಲಗಿ ಅವರು ಮಾತನಾಡಿ, ಪೌಷ್ಟಿಕ ಆಹಾರ ಸೇವನೆಯಿಂದ ನಮ್ಮ ದೇಹವನ್ನು ಸುದೃಢವಾಗಿ ಇಟ್ಟುಕೊಳ್ಳಬಹುದು. ಪೌಷ್ಟಿಕ ಆಹಾರ ದೇಹದ ಬೆಳವಣಿಗೆಗೆ ಅತ್ಯಗತ್ಯ. ಇದು ರೋಗಗಳನ್ನು ತಡೆಯಲು ಮತ್ತು ದೀರ್ಘಕಾಲದವರೆಗೆ ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ಸರಿಯಾದ ಪೋಷಣೆಯು ಶಕ್ತಿಯನ್ನು ಒದಗಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ .ಸಾತ್ವಿಕ ಆಹಾರವನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜ್ಞಾನವಿಕಾಸ ಸಮನ್ವಯಾದಿಕಾರಿ ರೇಣುಕಾ ಕೋಡಪದವು ಮಾತನಾಡಿ, ಹಿಂದಿನ ಆಹಾರ ಪದ್ಧತಿಗೂ ಈಗ ಇರುವ ಆಹಾರ ಪದ್ಧತಿಗೂ ಇರುವ ಅಜಗಜಾಂತರ ವ್ಯತ್ಯಾಸದ ಬಗ್ಗೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಹೇಳಿದರು.

ವೇದಿಕೆಯಲ್ಲಿ ಜ್ಞಾನವಿಕಾಸದ ಸಂಯೋಜಕಿ ಗಂಗಾ, ಚಿತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ, ನಮ್ಮ ಭೂಮಿ ಸಂಸ್ಥೆಯ ಕಾರ್ಯಕರ್ತರಾದ ನರಸಿಂಹ ಗಾಣಿಗ, ಚಿತ್ತೂರು ವಲಯದ ಸೇವಾ ಪ್ರತಿನಿಧಿ ಶೋಭಾ ಶೆಟ್ಟಿ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ಜ್ಞಾನವಿಕಾಸದ ಸದಸ್ಯೆ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಗಾಯತ್ರಿ ಸ್ವಾಗತಿಸಿದರು. ಚಿತ್ತೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶೋಭಾ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!