spot_img
Thursday, March 12, 2026
spot_img

ಕೋಡಿ ಬೆಂಗ್ರೆ ಹಂಗಾರಕಟ್ಟೆ ಬಾರ್ಜ್ ಲೋಕಾರ್ಪಣೆ

ಉಡುಪಿ: ಸುಮಾರು 2,05,78,040 ರೂ ವೆಚ್ಚದಲ್ಲಿ ಕೋಡಿ ಬೆಂಗ್ರೆ- ಹಂಗಾರಕಟ್ಟೆ ನದಿಯ ನಡುವೆ ಸಂಪರ್ಕ ಕಲ್ಪಿಸುವ ಮದ್ಯಮ ಗಾತ್ರದ ಹೊಸ ಬಾರ್ಜ್ ಕಾವೇರಿ ಅನ್ನು ಲೋಕಾರ್ಪಣೆ ಗೊಳಿಸಲಾಯಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಬಾರ್ಜ್ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಕೋಡಿ ಬೆಂಗ್ರೆಯಿಂದ ಹಂಗಾರಕಟ್ಟೆಗೆ ಸ್ಥಳೀಯ ಜನರು ಹಾಗೂ ಪ್ರವಾಸಕ್ಕೆಂದು ಆಗಮಿಸಿರುವ ಪ್ರಾವಸಿಗರಿಗೂ ಸಹ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳಸಲು ಅನುಕೂಲವಾಗಲಿದೆ. ಬಾರ್ಜ್ ಇಲ್ಲದಿದ್ದಲ್ಲಿ ರಸ್ತೆ ಮೂಲಕ ಸುತ್ತುವರಿದು ಹೋಗಬೇಕಿತ್ತು ಎಂದ ಅವರು
ಮುಂದಿನ ದಿನಗಳಲ್ಲಿ ಸ್ಥಳೀಯ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.

ಹಂಗಾರಕಟ್ಟೆ ಬಂದರಿನಲ್ಲಿ ಮೀನುಗಾರಿಕಾ ಪೂರಕ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಬಂದರಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಹಾಗೂ ಇದರ ಜೊತೆಯಲ್ಲಿ ಹೂಳೆತ್ತುವ ಕಾರ್ಯವನ್ನು ಮಾಡಲಾಗುವುದು ಎಂದ ಅವರು, ಶೆಡ್ ನ ನಿರ್ಮಾಣದ ಕಾಮಗಾರಿಯನ್ನು ೫೦ಲಕ್ಷ ರೂ ಗಳಲ್ಲಿ ಕೈಗೊಳ್ಳಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ ಇದನ್ನು ಉನ್ನತೀಕರಣಗೊಳಿಸುವುದರೊಂದಿಗೆ ಅಭಿವೃದಿ ಪಡಿಸಬೇಕು. ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕೋಡಿ-ಬೆಂಗ್ರೆ ಗ್ರಾಮವನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಸ್ಥಳೀಯ ಜನರು ವ್ಯಸನ ಮುಕ್ತವಾಗಿರುವುದು ಒಂದು ಉತ್ತಮ ಕಾರ್ಯವಾಗಿದ್ದು ಇದರಿಂದ ಜನರ ಆರೋಗ್ಯ ಹೆಚ್ಚಿನ ಸುಧಾರಣೆ ಸಾಧ್ಯವಾಗುತ್ತದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ವಿವೇಕ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಮುಖಂಡರುಗಳಾದ ದಿನೇಶ್ ಹೆಗ್ಡೆ, ರಾಜು ಬಂಗೇರ, ಪ್ರಸಾದ್ ಪಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!