spot_img
Thursday, March 12, 2026
spot_img

ಮಾನವೀಯತೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ

ಹೆಮ್ಮಾಡಿ: ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ.ಸುರೇಶ್ ಖಾರ್ವಿಯವರ ಮಗಳಾದ ಕುಮಾರಿ ಶ್ರೀಯಾ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ‌.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ‌ ಶುಲ್ಕವನ್ನು( ಕಾಲೇಜು ಶುಲ್ಕ,ಸಮವಸ್ತ್ರ, ಮಧ್ಯಾಹ್ನ ಊಟ, ವಾಹನ ಶುಲ್ಕ)ಭರಿಸುವುದಾಗಿ ಆಶ್ವಾಸನೆ ಕೊಟ್ಟಿದ್ದರು ಅಂತೆಯೇ ಈ ದಿನ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿಯ ಕಛೇರಿಯಲ್ಲಿ ‌ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಚೆಕ್ ಹಸ್ತಾಂತರಿಸುವ ಮೂಲಕ ನುಡಿದಂತೆ ನಡೆದು,ಎರಡು ವರ್ಷಗಳ ಪದವಿಪೂರ್ವ ಶಿಕ್ಷಣದ ಸಂಪೂರ್ಣ ಜವಬ್ದಾರಿಯನ್ನು ವಹಿಸಿಕೊಂಡು ಮಾನವೀಯತೆ ಮೆರೆದಿದ್ದಾರೆ.ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!