spot_img
Thursday, March 12, 2026
spot_img

ಕೋಟ: ಕಾರಂತ ಥೀಮ್ ಪಾರ್ಕ್‌ನಲ್ಲಿ ಕಾರಂತ ಜನ್ಮದಿನೋತ್ಸವ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಆಸರೆಯಲ್ಲಿ ಇಂದು ಕಾರಂತ ಥೀಮ್ ಪಾರ್ಕಿನಲ್ಲಿ ಡಾ. ಶಿವರಾಮ ಕಾರಂತರ ೧೨೩ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.

ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ ಕುಂದರ್ ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರಂತರ ಜೀವನಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅಗತ್ಯತೆ ಇದೆ. ಅವರ ಕೊಡುಗೆ, ಸಾಮಾಜಿಕ ಕಳಕಳಿ ಅವರ ಸಾಹಿತ್ಯದ ಸಾಧನೆ ನಮಗೆಲ್ಲರಿಗೂ ಮಾದರಿ ಎಂದು ನುಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಪಿ. ಡಿ.ಒ ಸುಧಾಕರ ಶೆಟ್ಟಿ, ಉಪಾಧ್ಯಕ್ಷರಾದ ಸರಸ್ವತಿ,ಪಂಚಾಯತ್ ಸದಸ್ಯರು ಹಾಗೂ ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು.

ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆ:
ಕಾರಣಾಂತರದಿಂದ ಈ ಬಾರಿ ನಡೆಯಬೇಕಿದ್ದ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!