spot_img
Thursday, March 12, 2026
spot_img

ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ-ಶಾಸಕ ಎ.ಕಿರಣ್ ಕೊಡ್ಗಿ

ಉಡುಪಿ: ಉಡುಪಿ ಜಿಲ್ಲೆಯ ಅಸಂಘಟಿತ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಮತ್ತು ಕುಂದಾಪುರಕ್ಕೆ ವಲಸೆ ಕಾರ್ಮಿಕರಿಗೆ ವಾಸ್ತವ್ಯ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದಿರುವುದು ಹಾಗೂ ಕುಂದಾಪುರದ ಇ‌ಎಸ್‌ಐ ಆಸ್ಪತ್ರೆಗೆ ಹಲವು ವರ್ಷಗಳಿಂದ ಖಾಯಂ ವೈದ್ಯರಿಲ್ಲದೆ ಜನರು ಪರದಾಡುತ್ತಿದ್ದು ಈ ಎರಡು ಬೇಡಿಕೆಗಳನ್ನು ಶೀಘ್ರದಲ್ಲಿ ಪರಿಹಾರ ಒದಗಿಸುವ ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ಗಮನಕ್ಕೆ ತಂದು ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅ.10ರಂದು ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಾಗೂ ವಿವಿಧ ಗಣ್ಯರು ಅಧಿಕಾರಿಗಳು ಹಾಗೂ ಎಲ್ಲಾ ವರ್ಗದ ಕಾರ್ಮಿಕರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!