spot_img
Thursday, March 12, 2026
spot_img

ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ನಲ್ಲಿ ವಿಶ್ವ ಅಂಚೆ ದಿನಾಚರಣೆ

ಶಂಕರನಾರಾಯಣ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದಲ್ಲಿ ಅಕ್ಟೋಬರ್ 9, 2025 ರಂದು ವಿಶ್ವ ಪೋಸ್ಟ್ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಹಾಲಾಡಿ 26ರ ಶಾಖಾ ಅಂಚೆಮಾಸ್ಟರ್, ಜೇಸಿ‌ಐ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ಪ್ರವೀಣ ನಾಯಕ್ ಬಾಳೆಕೊಡ್ಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

ಇಲಾಖೆಯ ಇತಿಹಾಸ, ಅದರ ಕಾರ್ಯಪದ್ಧತಿ ಹಾಗೂ ಇಂದಿನ ಡಿಜಿಟಲ್ ಯುಗದಲ್ಲಿಯೂ ಅಂಚೆಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮನೋಜ್ಞವಾಗಿ ಮಾಹಿತಿ ನೀಡಿದರು. ಅವರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಪತ್ರಗಳು, ಪೋಸ್ಟ್ ಕಾರ್ಡ್, ಸ್ಪೀಡ್ ಪೋಸ್ಟ್ ಮತ್ತು ಮನಿ ಆರ್ಡರ್‌ಗಳಂತಹ ಸೇವೆಗಳ ಕುರಿತು ಪ್ರವೀಣ್ ನಾಯಕ್ ವಿವರಿಸಿದರು.

ಕಾರ್ಯಕ್ರಮವನ್ನು ಇನ್ನಷ್ಟು ಆಸಕ್ತಿದಾಯಕಗೊಳಿಸಲು ಅವರು ಮಕ್ಕಳಿಗೆ ಪ್ರಶ್ನೋತ್ತರ ಮಾದರಿಯಲ್ಲಿ ಸಂವಾದ ನಡೆಸಿ, ಉತ್ತರಿಸಿದ ಮಕ್ಕಳಿಗೆ ಪ್ರೋತ್ಸಾಹದ ಬಹುಮಾನಗಳನ್ನು ನೀಡಿದರು. ಈ ಮೂಲಕ ವಿದ್ಯಾರ್ಥಿಗಳು ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಪ್ರಾಯೋಗಿಕ ಅರಿವು ಪಡೆದು, ಪತ್ರ ಬರೆಯುವ ಸಂಸ್ಕೃತಿಯ ಮಹತ್ವವನ್ನು ಅರ್ಥಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಮಕ್ಕಳು ‘Through Every Envelope, The World Grows Closer’ ಎಂಬ ಆಶಯವಾಕ್ಯದ ಅರ್ಥವನ್ನು ನಿಜಕ್ಕೂ ಮನಸ್ಸಿನಲ್ಲಿ ಅಳವಡಿಸಿಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!