spot_img
Thursday, March 12, 2026
spot_img

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳೊಂದಿಗೆ ತಮಿಳುನಾಡು ಸಹಕಾರಿ ಲೆಕ್ಕಪರಿಶೋಧಕರ ಅಧ್ಯಯನ ತಂಡ ಭೇಟಿ

ಕೋಟ: ಉಡುಪಿ ಜಿಲ್ಲೆಯ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅ.೮ ರಂದು ನಬಾರ್ಡ್‌ನ ಡಿಜಿ‌ಎಮ್ ಯೋಗೀಶ ಕುಮಾರ್ ಇವರ ನೇತೃತ್ವದಲ್ಲಿ ತಮಿಳುನಾಡು ರಾಜ್ಯದ ೨೫ ಮಂದಿ ಸಹಕಾರಿ ಲೆಕ್ಕಪರಿಶೋಧಕರ ಅಧ್ಯಯನ ತಂಡದವರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯವಹಣಾಧಿಕಾರಿ ಸುಕೇಶಿನಿ, ಅಮ್ಟಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯವಹಣಾಧಿಕಾರಿ ಅಜಯ ಕುಮಾರ್ ಅಜಿಲ, ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯವಹಣಾಧಿಕಾರಿ ಅಂಕಿತಾ, ಕಾವಳ ಪಡವೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯವಹಣಾಧಿಕಾರಿ ಶಿವಾನಂದ ಇವರು ಭೇಟಿ ನೀಡಿದರು.

ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಇವರು ಸಂಘವು ನಡೆದು ಬಂದ ದಾರಿ, ಸದಸ್ಯತ್ವ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಉಳಿತಾಯ ಕ್ರೋಢೀಕರಣ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ವಿವರವಾಗಿ ಮಾಹಿತಿ ನೀಡಿದರು.

ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡರು. ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಸರ್ವತೋಮುಖ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ಸಕಲ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರು ಭೇಟಿ ನೀಡಿದ ಅಧಿಕಾರಿಗಳನ್ನು ಸ್ವಾಗತಿಸಿ, ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!