spot_img
Wednesday, March 11, 2026
spot_img

ಶಿವರಾಮ ಕಾರಂತರ ಜನ್ಮ ದಿನೋತ್ಸವ ಮತ್ತು ಶಾರದಾವಾಣಿ ವಾರ್ಷಿಕ ಸಂಚಿಕೆ ಬಿಡುಗಡೆ

ಬಸ್ರೂರು: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಅ.10ರಂದು ಕನ್ನಡ ವಿಭಾಗ ಮತ್ತು ಸಾಹಿತ್ಯ ಸಂಘದ ಆಶ್ರಯದಲ್ಲಿ ಡಾ. ಕೆ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಪ್ರಬಂಧ ಮಂಡನೆ ಮತ್ತು ಶಾರದಾವಾಣಿ ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿವೃತ್ತ ಪ್ರಾಧ್ಯಾಪಕರಾದ ಡಾ. ರೇಖಾ ವಿ ಬನ್ನಾಡಿ ಮಾತನಾಡಿ ವಿದ್ಯಾರ್ಥಿಗಳು ಸಾಹಿತ್ಯವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಾಗ ಜೀವನಕ್ಕೆ ಬೇಕಾಗುವ ಮೌಲ್ಯಗಳು ಸಂವೇದನಶೀಲ ಗುಣ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಆದ್ದರಿಂದ ಕಾರಂತರ ಸಾಹಿತ್ಯ ಮತ್ತು ಕಾದಂಬರಿಗಳು ಈ ನೆಲದ ಸಂಸ್ಕೃತಿ ಮತ್ತು ಸ್ತ್ರೀ ಸಂವೇದನೆ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದವು. ಕಾರಂತರ ಕಾದಂಬರಿಗಳಾದ ಮೂಕಜ್ಜಿಕನಸು ಮತ್ತು ಮರಳಿ ಮಣ್ಣಿಗೆ ಸಾಮಾಜಿಕ ಹಾಗೂ ಸಾಂಸ್ಕ್ರತಿಕ ಸಮಸೆಗಳ ಕುರಿತು ಚಿಂತನೆಗೆ ಹಚ್ಚುವುದಲ್ಲದೇ ಯುವಜನಾಂಗ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೂರಜ್ ಕುಮಾರ್ ಶೆಟ್ಟಿ ಬಿ, ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ ಎನ್, ಐಕ್ಯೂ‌ಎಸಿ ಸಂಯೋಜಕರಾದ ಸಂದಿಪ್ ಕೆ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶಿಫಾನ ಪ್ರಥಮ ಬಿ.ಎ, ಸೌಮ್ಯ ತೃತೀಯ ಬಿ.ಕಾಂ, ಜ್ಯೋತಿ ತೃತೀಯ ಬಿ.ಎ ಕಾರಂತರ ಕಾದಂಬರಿಗಳನ್ನು ವಾಚಿಸಿದರು. ಉಪನ್ಯಾಸಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರಮೀಳಾ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!