spot_img
Wednesday, March 11, 2026
spot_img

ಶಂಕರನಾರಾಯಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಂಕರನಾರಾಯಣ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣದ ಆಂತರಿಕ ಗುಣಮಟ್ಟ ಭರವಸಾಕೋಶ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೇಂಜರ್ಸ್ ರೋವರ್ಸ್ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಶಂಕರನಾರಾಯಣದ ಸಹಕಾರದೊಂದಿಗೆ ಗಾಂಧಿ ಜಯಂತಿಯ ಪ್ರಯುಕ್ತ “ಸ್ವಚ್ಛತಾ ಹಿ ಸೇವಾ” ಅಭಿಯಾನದಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳು ಕಾಲೇಜಿನ ಆವರಣದಿಂದ ಗ್ರಾಮ ಪಂಚಾಯತ್ ಕಚೇರಿಯವರೆಗೆ ಸ್ವಚ್ಛತಾ ಜಾಥಾವನ್ನು ನಡೆಸಿದರು. ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಶಂಕರನಾರಾಯಣ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಶಂಕರನಾರಾಯಣ ಭಟ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಮಮತಾ ಅವರು ಸ್ವಚ್ಛತಾ ಅಭಿಯಾನದ ಉದ್ದೇಶವನ್ನು ತಿಳಿಸಿ, ವಿದ್ಯಾರ್ಥಿಗಳ ಈ ಪ್ರಯತ್ನವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ  ರವಿ ಕುಲಾಲ್, ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ರಾಮಚಂದ್ರ ಜಿ.ಎಸ್ ಹಾಗೂ ಪ್ರಜ್ಞಾ, ಐಕ್ಯೂ‌ಎಸಿ ಸಹ ಸಂಚಾಲಕಿ ಡಾ. ನಳಿನಶ್ರೀ ಆರ್.ಎನ್, ರೇಂಜಸ್ ರೋವರ್ಸ್ ಸಂಚಾಲಕ ಸಚಿನ್ ಎಸ್ ಉಪಸ್ಥಿತರಿದ್ದರು.

ನಂತರ ಶಂಕರನಾರಾಯಣ ಪೇಟೆಯ ನಾಲ್ಕು ರಸ್ತೆಗಳ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಕಸಗಳನ್ನು ತೆರವು ಮಾಡಿ, ಶುಚಿಗೊಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!