spot_img
Wednesday, March 11, 2026
spot_img

ಎನ್.ಎಸ್‌.ಎಸ್‌ ನಂತಹ ಯೋಜನೆಯಿಂದ ವಿವಿಧತೆಯಲ್ಲಿ ಏಕತೆ ಸಾಧಿಸಲು ಭಾರತದಂತ ದೇಶದಲ್ಲಿ ಸಾಧ್ಯ- ಕೋಟ ಶ್ರೀನಿವಾಸ ಪೂಜಾರಿ 

ಕೋಟ: ವಿದ್ಯಾರ್ಥಿಗಳು ತರಗತಿಯಲ್ಲಿ ಕುಳಿತು ಪಾಠಪ್ರವಚನ ಕೇಳುವುದರೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಭಾರತವು ವಿವಿಧತೆಯಿಂದ ಕೂಡಿದ ದೇಶವಾಗಿದೆ. ಇಲ್ಲಿನ ಆಚಾರ-ವಿಚಾರ, ಸಂಸ್ಕೃತಿ, ಮೌಲ್ಯಗಳೆಲ್ಲವನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ  ಹೆಚ್ಚಾಗಿ ಕಲಿಯಬಹುದು ಹಾಗಾಗಿ ಶಿಬಿರಾರ್ಥಿಗಳಲ್ಲಿ ಏಕತೆಯನ್ನು ಮೂಡಿಸಿ, ರಾಷ್ಟ್ರದ ಅಭಿವೃದ್ದಿಯತ್ತ ಸಾಗಲು ಎನ್.ಎಸ್.ಎಸ್‌ ಶಿಬಿರಗಳು ಕಾರಣವಾಗುತ್ತವೆ, ಜಾತಿ, ಧರ್ಮಗಳನ್ನು ಮೀರಿ ನಾವೆಲ್ಲರು ಒಂದೇ ಎಂಬ ಭಾವನೆಯನ್ನು ಮೂಡಿಸುವುದು ಈ ಶಿಬಿರದ ಧ್ಯೇಯವಾಗಿದ್ದು, ಇಂತಹ ಶಿಬಿರಗಳಿಂದ ದೇಶದಲ್ಲಿ ಐಕ್ಯತೆ ಹಾಗೂ ಅಭಿವೃದ್ದಿ ಸಾಧಿಸಲು ಸಾಧ್ಯವಾಗುತ್ತದೆ ಎಂದು  ಸಂಸದ  ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು.

ಕೋಟ ಪಡುಕೆರೆಯ ಪದವಿ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಸಮಾರೋಪ ಭಾಷಣ ಮಾಡಿದ ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಸ್ತುತ ಸಿ.ಎ. ಬ್ಯಾಂಕ್‌ ಕೋಟ ಇದರ ಅಧ್ಯಕ್ಷರಾದ ಡಾ.ಕೃಷ್ಣ ಕಾಂಚನ್‌ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಬಲ್ಲ ವಿವಿಧ ದೃಷ್ಟಾಂತಗಳನ್ನು ಉದಾಹರಿಸಿ ಉಜ್ವಲ ಭವಿಷ್ಯವನ್ನು ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿ ಖ್ಯಾತ ಮನೋವೈದ್ಯ ಡಾ.ಪ್ರಕಾಶ್‌ ತೋಳಾರ್‌, ಇವರು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಹುದುಗಿರುವ ಆಗಾಧವಾದ ಶಕ್ತಿಯನ್ನು ಉದ್ದೀಪನಗೊಳಿಸಿಕೊಳ್ಳುಲು ಇಂತಹ ಶಿಬಿರಗಳಿಂದ ಸಾಧ್ಯವಾಗುತ್ತದೆ ಎನ್ನುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ  ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್‌ ನಾಯಕ ಅವರು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳನ್ನು ತಿಳಿಸಿದರು. ಗ್ರಾಮ ಪಂಚಾಯತ್‌ ಸ್ಥಳೀಯ ಸದಸ್ಯರಾದ ರವೀಂದ್ರ ತಿಂಗಳಾಯ, ಮುಖ್ಯ ಶಿಕ್ಷಕರಾದ ಶ್ರೀಮತಿ ಜಾನಕಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಪ್ರಸಾದ್‌ ಬಿಲ್ಲವ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಡಾ. ರಮೇಶ ಆಚಾರ್‌ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಸಂಜನಾ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಬಿರಾಧಿಕಾರಿಯಾದ ಡಾ.ಪ್ರಕಾಶ್‌ ಕೆ ಧನ್ಯವಾದಗಳನ್ನು ತಿಳಿಸಿದರು.

ದಿನಾಂಕ : 01.10.2025 ರಂದು ಆರಂಭವಾದ ಏಳು ದಿನಗಳ ಶಿಬಿರ ದಿನಾಂಕ : 07.10.2025ರಂದು ಸಂಪನ್ನಗೊಂಡಿತು. ಗಿಡಗಳನ್ನು ನೆಡುವುದು, ಕಡಲ ಕಿನಾರೆಯನ್ನು ಸ್ವಚ್ಚಗೊಳಿಸುವುದು, ಗ್ರಾಮದ ಸ್ವಚ್ಛತೆ ಇತ್ಯಾದಿ ಶ್ರಮದಾನದ ಜೊತೆಗೆ , ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!