spot_img
Sunday, April 26, 2026
spot_img

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು: ವಿದ್ಯಾರ್ಥಿಗಳ ಸುರಕ್ಷತೆಗಾಗಿ ಬ್ಯಾರಿಕೇಡ್‌ಗಳ ಕೊಡುಗೆ ಹಸ್ತಾಂತರ

ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ ವಿದ್ಯಾರ್ಥಿಗಳ ಸುರಕ್ಷತೆಗಾಗಿ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ಗಳ ಅಗತ್ಯವನ್ನು ಹಳೆವಿದ್ಯಾರ್ಥಿಗಳ ಸಂಘದ ಮನವಿಯ ಮೇರೆಗೆ ಬಗ್ವಾಡಿ ಮೆತ್ತಿನಮನೆ ವೆಂಕಮ್ಮ ರಾಮಣ್ಣ ಶೆಟ್ಟಿ ಟ್ರಸ್ಟ್ ರಿ., ಬಗ್ವಾಡಿ ಇದರ ಅಧ್ಯಕ್ಷರಾದ ಬಿ.ಎನ್.ಶೆಟ್ಟಿ ಬಗ್ವಾಡಿ ಹಾಗೂ ಕಾರ್ಯದರ್ಶಿ ಬಗ್ವಾಡಿ ರಾಜೀವ ಶೆಟ್ಟಿ ಅವರು ಎರಡು ಬ್ಯಾರಿಕೇಡ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಅ.15ರಂದು ಬ್ಯಾರಿಕೇಡ್‌ಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ (ಕಂಡ್ಲೂರು) ಠಾಣಾಧಿಕಾರಿ ನಾಸೀರ್ ಹುಸೇನ್ ಇವರಿಗೆ ಹಸ್ತಾಂತರಿಸಿ ರಸ್ತೆಗೆ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗೆ ನೀಡಿದ ಬಿ.ಎನ್.ಶೆಟ್ಟಿ ಬಗ್ವಾಡಿ, ರಾಜೀವ ಶೆಟ್ಟಿ ಬಗ್ವಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನೆಂಪು ಸಂತೋಷ ಕುಮಾರ್ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರಾದ ರಾಘವೇಂದ್ರ ನೆಂಪು, ರಾಜೇಂದ್ರ ನೆಂಪು, ಪ್ರಾಂಶುಪಾಲರಾದ ಕೃಷ್ಣರಾಜ ಭಟ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಧರ ಭಟ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಕುಪ್ಪಯ್ಯ ಮರಾಠಿ ಹಾಗೂ ಅಧ್ಯಾಪಕ ವೃಂದ, ಸಿ.ಬಿ.ಸಿ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ, ಅಧ್ಯಾಪಕ ರವಿರಾಜ ಶೆಟ್ಟಿ ಸ್ವಾಗತಿಸಿದರು. ಬಿ.ಎನ್ ಶೆಟ್ಟಿ ಅವರು ಶುಭ ಹಾರೈಸಿದರು.ಅಧ್ಯಾಪಕ ಗಣೇಶ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!