spot_img
Wednesday, March 11, 2026
spot_img

ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತ ದಿನೇಶ ಅಮ್ಮಣ್ಣಾಯ ವಿಧಿವಶ

ಕುಂದಾಪುರ: ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಲ್ಲಿ ಓರ್ವರಾಗಿದ್ದ ದಿನೇಶ ಅಮ್ಮಣ್ಣಾಯ (66ವ) ಇಂದು (ಅ.16) ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.

ದಾಮೋದರ ಮಂಡೆಚ್ಚ ಮತ್ತು ಹರಿನಾರಾಯಣ ಬೈಪಡಿತ್ತಾಯರಿಂದ ಅನುಕ್ರಮವಾಗಿ ಭಾಗವತಿಕೆ ಮತ್ತು ಹಿಮ್ಮೇಳವಾದನ ಅಭ್ಯಾಸ ಮಾಡಿ ಪುತ್ತೂರು ಮೇಳದಲ್ಲಿ ಹಿಮ್ಮೇಳ ವಾದಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ದೀರ್ಘಕಾಲ (೨೧ ವರ್ಷ) ಕರ್ನಾಟಕ ಮೇಳದಲ್ಲಿ, ಕದ್ರಿ, ಎಡನೀರು, ಕುಂಟಾರು ಮೇಳಗಳಲ್ಲಿ ಒಟ್ಟೂ ಸುಮಾರು ನಾಲ್ಕು ದಶಕಗಳ ಕಲಾಸೇವೆ ಗೈದಿದ್ದರು. ಎಡನೀರು ಮಠದ ಭಕ್ತರಾಗಿದ್ದ ಅಮ್ಮಣ್ಣಾಯರು ಸ್ವಾಮೀಜಿದ್ವಯರ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿದ್ದರು. ಅಲ್ಲಿ ನಡೆಯುವ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗ ವಹಿಸುತ್ತಿದ್ದರು. ತಮ್ಮ ಸುಮಧುರ ಕಂಠ ಮಾಧುರ್ಯ ಮತ್ತು ರಾಗಸಂಯೋಜನೆಯಿಂದ ಮಾನಿಷಾದ, ಸತ್ಯ ಹರಿಶ್ಚಂದ್ರ, ಕಾಡ ಮಲ್ಲಿಗೆ, ಪಟ್ಟದ ಪದ್ಮಲೆ ಸೇರಿದಂತೆ ಹಲವು ಕನ್ನಡ, ತುಳು ಪ್ರಸಂಗಗಳನ್ನು ಪರಿಣಾಮಕಾರಿಯಾಗಿ ಹಾಡಿ ಕಲಾರಸಿಕರ ಮನ ಗೆದ್ದಿದ್ದರು. ಕರುಣರಸ ಪ್ರಸ್ತುತಿಯಲ್ಲಿ ಅಸಾಧಾರಣ ಸಿದ್ಧಿ ಪ್ರಸಿದ್ಧಿ ಪಡೆದಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಯಕ್ಷಗಾನ ಕಲಾರಂಗ ಸಂಸ್ಥೆ ಐದು ವರ್ಷದ ಹಿಂದೆ ಮಲ್ಪೆ ಶಂಕರನಾರಾಯಣ ಸಾಮಗರ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ಸೂಚಿಸಿದ್ದಾರೆ.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!