spot_img
Wednesday, March 11, 2026
spot_img

ದ್ವೇಷದ ಬೆಂಕಿ ನಂದಿಸಲು ಸಾಹಿತ್ಯ ಸಹಕಾರಿ-ಡಾ.ರಾಜೇಂದ್ರ ನಾಯಕ್

ಕೋಟ. : ’ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸ ಬಲ್ಲ ಪ್ರೀತಿಗೆ ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆ. ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಾಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು ಹೆಚ್ಚು ಪ್ರಯೋಜನಕಾರಿ’ ಎಂದು ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ನಾಯಕ್ ಹೇಳಿದರು.

ಅವರು ಕಾಲೆಜಿನ ಕನ್ನಡ ಸಂಘ ಮತ್ತು ಐಕ್ಯೂ‌ಎಸಿ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕುಂದಾಪುರದ ಜೆಸ್ಸಿ ಎಲಿಝಬೆತ್ ಜೋಸೆಫ್ ಮಲೆಯಾಳದಿಂದ ಅನುವಾದಿಸಿದ ’ಹೆಂಡತಿ’ ಕಾದಂಬರಿಯ ಬಿಡುಗಡೆ ಸಮಾರಂಭದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದರು.

ಪುಸ್ತಕದ ಲೇಖಕಿ ಜೆಸ್ಸಿ ಎಲಿಝಬೆತ್ ಜೋಸೆಫ್ ಪ್ರಾಸ್ತಾವಿಕವಾಗಿ ತಾನು ಅನುವಾದದಲ್ಲಿ ತೊಡಗಿಕೊಂಡ ಬಗೆಯನ್ನು ವಿವರಿಸಿದರು.

ಕೊಟೇಶ್ವರದ ಆಚಾರ್ಯ ನರ್ಸಿಂಗ್ ಹೋಂನ ವೈದ್ಯಾಧಿಕಾರಿ , ಖ್ಯಾತ ಸಾಹಿತಿ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಆಚಾರ್ಯರು ಪುಸ್ತಕ ಲೋಕಾರ್ಪಣೆ ಮಾಡಿ ಪ್ರಪಂಚವನ್ನು ಒಂದಾಗಿಸುವಲ್ಲಿ ಅನುವಾದ ಮತ್ತು ಅನುವಾದಕರ ಮಹತ್ವದ ಕುರಿತು ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಆಚಾರ್ ಪುಸ್ತಕದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದರು.

ಲೇಖಕಿ ಪಾರ್ವತಿ ಜಿ.ಐತಾಳ್ ಶುಭಾಶಂಸನೆಗೈದರು. ಐಕ್ಯೂ‌ಎಸಿ ಮುಖ್ಯಸ್ಥ ಪ್ರೊ.ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಂಗ್ಲಿಷ್ ಉಪನ್ಯಾಸಕಿ ಸುಷ್ಮಾ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಡಾ.ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!