spot_img
Wednesday, March 11, 2026
spot_img

ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ: 2025-26 ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನ
ಕಾರ್ಯಕ್ರಮ ಅಕ್ಟೋಬರ್ 18ರಂದು ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ನಾವಡ ಕಾರ್ಯಕ್ರಮ ಉದ್ಘಾಟಿಸಿ ,ಕಾಲೇಜು
ಅಭಿವೃದ್ಧಿಗೆ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಜೊತೆ ನಿರಂತರ ಒಡನಾಟ
ಇಟ್ಟುಕೊಂಡಾಗ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ
ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ರಾಕ್ತನ ಯಾನ ಹಾಗೂ ಯಶೋದೀಪ ಯೋಜನೆಗೆ ಚಾಲನೆ ನೀಡಿದರು.
ಉಪ-ಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಆಶಯದ ನುಡಿಗಳನ್ನಾಡಿದರು ಮತ್ತು ಆಡಳಿತ ನಿಕಾಯಕ ಶ್ರೀ ರಕ್ಷಿತ್
ರಾವ್ ಗುಜ್ಜಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಭಿನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಾಕ್ತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಕಾಲೇಜಿನ
ಪ್ರಾಂಶುಪಾಲರಾದ ಪ್ರೊ. ಡಾ. ಕೊತ್ತಾಡಿ ಉಮೇಶ್ ಶೆಟ್ಟಿಯವರು ಕೊಯಮತ್ತೂರಿನ ಭಾರತೀಯಾರ್ ವಿಶ್ವವಿದ್ಯಾನಿಲಯದಿಂದ
“ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು”ಎಂಬ ಸಂಶೋಧನಾ
ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದ ಅವರನ್ನು ಅಭಿನಂದಿಸಲಾಯಿತು.

ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಯೋಗೀಶ್ ಶಾನುಭೋಗ್ ಕಾವ್ರಾಡಿ ಪ್ರಸ್ತಾವಿಸಿದರು , ಖಜಾಂಚಿ ಶ್ರೀ ಸಚಿನ್
ಸ್ವಾಗತಿಸಿ, ಉಪಾಧ್ಯಕ್ಷೆ ಶ್ರೀಮತಿ ಜೋಸ್ಲಿನ್ ಅಲ್ಮೇಡಾ ವಂದಿಸಿದರು.

ಈ ಸಂದರ್ಭ ಸಂಘದ ಜೊತೆ ಕಾರ್ಯದರ್ಶಿ ವಿದ್ಯಾವತಿ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ದರ್ಶನ್ ಉಪಸ್ಥಿತರಿದ್ದರು. ಸಂಘದ
ಕಾರ್ಯದರ್ಶಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರಾಕ್ತನಾ ವಿದ್ಯಾರ್ಥಿನಿ ಅಂಕಿತ ಶೇಟ್ ಪ್ರಾರ್ಥಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!