spot_img
Saturday, April 25, 2026
spot_img

ಬಸ್ರೂರು: ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಹಬ್ಬದ ಆಚರಣೆ

ಕುಂದಾಪುರ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.೨೧ರಂದು ದೀಪಾವಳಿ ಹಬ್ಬವನ್ನು ಅತ್ಯಂತ ಭಕ್ತಿ ಭಾವದಿಂದ ಹಾಗೂ ಉತ್ಸಾಹ ಭರಿತವಾಗಿ ಆಚರಿಸಲಾಯಿತು.

ಪ್ರಥಮವಾಗಿ ಲಕ್ಷ್ಮಿ ಪೂಜೆಯನ್ನು ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಹಾಗೂ ಶ್ರೀಮತಿ ಆಶಾ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಯಿತು.

ದೀಪಾವಳಿ ಹಬ್ಬದ ಅಂಗವಾಗಿ ಶಾಲೆಯಲ್ಲಿ ಸ್ಕ್ವಾರ್ಡ್ ವಾಯಸ್ ವಿಭಾಗದಲ್ಲಿ ರಂಗೋಲಿ ಹೂವಿನ ರಂಗೋಲಿ, ಗ್ರೀಟಿಂಗ್ ಕಾರ್ಡ್ ತಯಾರಿಕೆ ,ಮಣ್ಣಿನಿಂದ ದೀಪ ತಯಾರಿಕೆ, ಗೂಡುದೀಪ ತಯಾರಿಕೆ, ತರಗತಿ ಕೋಣೆ ಅಲಂಕಾರ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ವಿದ್ಯಾರ್ಥಿಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿ ಬಣ್ಣಗಳ ಲೋಕದಲ್ಲಿ ಅದ್ಭುತ ವಿನ್ಯಾಸಗಳನ್ನು ಸೃಷ್ಟಿಸಿದರು. ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಆಶಾ ಪಿ, ಭವ್ಯರಮೇಶ್ ಆಗಮಿಸಿದ್ದರು.

ಎಲ್ಲ ವಿದ್ಯಾರ್ಥಿಗಳು ಸಾಂಸ್ಕೃತಿಕ ಉಡುಪುಗಳನ್ನು ಧರಿಸಿ ಹಬ್ಬದ ಕಳೆಯನ್ನು ಇನ್ನಷ್ಟು ಹೆಚ್ಚಿಸಿದರು. ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ರೇಷ್ಮಾ ಅಡಪ ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!