spot_img
Wednesday, March 11, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

ಕುಂದಾಪುರ: ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬ0ಧಿಯಾಗಿದ್ದು,
ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ,
ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕೆಂದು ಹೆಮ್ಮಾಡಿಯ ಜನತಾ
ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ ಶೆಟ್ಟಿ ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್
ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ
ಅತಿಥಿಗಳನ್ನು ಪರಿಚಯಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಜಿ.
ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ನಿರೂಪಿಸಿದರು.

ಈ ಸಂದರ್ಭ ಲಕ್ಷ್ಮಿ ಪೂಜೆ, ಗೋಪೂಜೆ, ಬಲೀಂದ್ರ ಪೂಜೆಯನ್ನು ಕಾಲೇಜಿನ ಆವರಣದಲ್ಲಿ ನೆರವೇರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!