spot_img
Wednesday, March 11, 2026
spot_img

ಸಂಗಮ್ ಜಂಕ್ಷನ್ ನಲ್ಲಿ ಪ್ಲೈ ಓವರ್, ಪ್ರಾಧಿಕಾರಕ್ಕೆ ಪತ್ರ-ಸಂಸದ ಕೋಟ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯ ಹೃದಯ ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕುಂದಾಪುರ ಕೆ‌ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಸಂಗಮ್ ಸರ್ಕಲ್ ತನಕ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿ ಸಮರ್ಪಕ ಸರ್ವಿಸ್ ರಸ್ತೆ ನಿರ್ಮಾಣ ಮಾಡದೇ ಇರುವುದರಿಂದ ವಾಹನ ಓಡಾಟಕ್ಕೆ ತುಂಬಾ ತೊಂದರೆಯಾಗಿದ್ದು, ಸಂಗಮ್ ಪ್ರದೇಶದಲ್ಲಿ ನಡೆದಿರುವ ಅಪಘಾತಗಳಲ್ಲಿ ೯ ಮಂದಿ ದುರ್ಮರಣ ಹೊಂದಿದ್ದು ಪ್ರತಿನಿತ್ಯ ಅನೇಕ ಅಪಘಾತಗಳು ಸಂಭವಿಸುತ್ತಿರುತ್ತದೆ. ಐದು ಕಡೆಯಿಂದ ವಾಹನಗಳು ಬರುವಾಗ ಇಲ್ಲಿ ಇಕ್ಕಟ್ಟು ಸಂಚಾರ ದಟ್ಟಣೆ ಸ್ವಾಭಾವಿಕವಾಗಿ ಇರುತ್ತದೆ. ಆದುದರಿಂದ ಇಲ್ಲಿ ಪ್ಲೇ ಓವರ್ ನಿರ್ಮಾಣದ ಅಗತ್ಯ ಇರುವುದರಿಂದ ಸಂಗಮ್ ಜಂಕ್ಷನ್ ನಲ್ಲಿ ಇನ್ನೊಂದು ಪ್ಲೈ ಓವರ್ ಮಾಡಲು ಹೆದ್ದಾರಿ ಪ್ರಾಧಿಕಾರಕ್ಕೆ ಬರೆಯಲಾಗುವುದು ಎಂದು ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಂದಾಪುರ ಕೆ.ಎಸ್‌ಆರ್.ಟಿ.ಸಿ ಬಸ್ ನಿಲ್ದಾಣದಿಂದ ಸಂಗಮ್ ಸರ್ಕಲ್ ತನಕ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಿ ಹೈಮಾಸ್ಟ್ ದೀಪ ಅಳವಡಿಸುವ ಬಗ್ಗೆ ಅ.೨೩ರಂದು ಕುಂದಾಪುರ ಶಾಸಕರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸರ್ವಿಸ್ ರಸ್ತೆಯಲ್ಲಿ ಚರಂಡಿ, ಹೈಮಾಸ್ಟ್ ದೀಪ ಮೊದಲಾದ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಒದಗಿಸುವ ಕೆಲಸ ಬೇಗ ಆಗಬೇಕು, ಚರಂಡಿ ಅಸಮರ್ಪಕವಾಗಿದ್ದು ತಕ್ಷಣ ಸರಿಪಡಿಸಬೇಕು ಎಂದು ಎಂದರು.

ಎಪಿ‌ಎಂಸಿ ಬಳಿ ಸಣ್ಣ ಮಳೆಗೂ ಚರಂಡಿ ಅವ್ಯವಸ್ಥೆಯಿಂದಾಗಿ ನೀರು ನಿಲ್ಲುತ್ತದೆ. ಪುರಸಭಾ ವ್ಯಾಪ್ತಿಯಲ್ಲಿ ಇಷ್ಟು ಸಣ್ಣ ಸರ್ವಿಸ್ ರಸ್ತೆ ಕಾಮಗಾರಿ ಬಾಕಿ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅತಿ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕುಂದಾಪುರ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ ಮಾತನಾಡಿ, ಚರಂಡಿ ಅಸಮರ್ಪಕವಾಗಿದ್ದು ಪುರಸಭೆ ವ್ಯಾಪ್ತಿಯಲ್ಲಿ ಸಮಸ್ಯೆಗೆ ಕಾರಣವಾಗಿದೆ. ಎಪಿ‌ಎಂಸಿ ಬಳಿ ಚರಂಡಿ ದುರಸ್ತಿಯನ್ನು ಕೂಡಲೇ ಮಾಡಬೇಕು, ಈಗಾಗಲೇ ಹೆದ್ದಾರಿ ಪ್ರಾಧಿಕಾರದಿಂದ ಪುರಸಭೆ ವ್ಯಾಪ್ತಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತರಲಾಗಿದೆ ಎಂದರು. ಕುಂದಾಪುರ ಪುರಸಭೆ ವ್ಯಾಪ್ತಿಗೆ ಸ್ವಾಗತ ಮತ್ತು ಶುಭ ವಿದಾಯ ಫಲಕ ಅಳವಡಿಕೆಗೆ ಹೆದ್ದಾರಿ ಪ್ರಾಧಿಕಾರ ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಮುಖ್ಯ ಅಧಿಕಾರಿ ಆನಂದ ಜೆ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಪುರಸಭಾ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭೆ ಸದಸ್ಯ ಸಂತೋಷ್ ಶೆಟ್ಟಿ, ಶೇಖರ್ ಪೂಜಾರಿ, ಶ್ರೀಧರ್ ಶೇರಿಗಾರ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಬಿಲ್ಲವ, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಕುಂದಾಪುರ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿಮನೆ, ಅರುಣ್ ಬಾಣ, ಪುರಸಭಾ ಇಂಜಿನಿಯರ್ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!