spot_img
Wednesday, March 11, 2026
spot_img

ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ |ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ:  ದ.ಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜೈನ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು ೨೮ ಚಿನ್ನ, ೨೦ ಬೆಳ್ಳಿ ಮತ್ತು ೦೪ ಕಂಚಿನ ಪದಕಗಳೊಂದಿಗೆ ೫೨ ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ ೧೦೦ ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ ೧೦೪ ಅಂಕ ಒಟ್ಟು ೨೦೪ ಅಂಕದೊAದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ೧೬ ಅಂಕಗಳೊದಿಗೆ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಜೈನ್ ಪದವಿಪೂರ್ವ ಕಾಲೇಜು ೧೯ ಅಂಕ ಪಡೆದು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಬಾಲಕರ ವೈಯಕ್ತಿಕ ಪ್ರಶಸ್ತಿಯನ್ನು ಆಳ್ವಾಸಿನ ಸಮರ್ಥ ಪಡೆದುಕೊಂಡರೆ, ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸಿನ ನಾಗಿಣಿ ಪಡೆದುಕೊಂಡರು.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!