spot_img
Wednesday, March 11, 2026
spot_img

ಡಾ. ಚೇತನ್ ಶೆಟ್ಟಿ ಕೋವಾಡಿಯವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಕುಂದಾಪುರ: ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ, ಬೆಂಗಳೂರು ಇವರು ಶೈಕ್ಷಣಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರ ರತ್ನ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ವಿಜಯಪುರದ ವನಶ್ರೀ ಸಂಸ್ಥಾನಮಠದ ಪೀಠಾಧಿಪತಿ ಡಾ. ಜಯಬಸವ ಮಹಾಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಎನ್. ಗಡದಿನ್ನಿ, ಕಾರ್ಯಾಧ್ಯಕ್ಷ ಡಾ. ಜಯಶೀಲ ಶೆಟ್ಟಿ, ಸಂಗನಗೌಡ ಪಾಟೀಲ ಕಲ್ಲೂರ ಮತ್ತಿತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!