spot_img
Wednesday, March 25, 2026
spot_img

ಗ್ರಾಮ ಪಂಚಾಯತಿ ಚುನಾವಣೆ ಘೋಷಣೆ: ಉಡುಪಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ

ಉಡುಪಿ, ನ.30: ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 22 ಮತ್ತು ಡಿಸೆಂಬರ್ 27ಕ್ಕೆ ಚುನಾವಣೆ ನಿಗದಿಯಾಗಿದೆ. ಮತ ಎಣಿಕೆ ಡಿಸೆಂಬರ್ 30ರಂದು ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು ಡಿ.22ರಂದು ಉಡುಪಿ ತಾಲೂಕು, ಹೆಬ್ರಿ ತಾಲೂಕು, ಬೈಂದೂರು ತಾಲೂಕು, ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಡಿ.27 ರಂದು ಕುಂದಾಪುರ ತಾಲೂಕು, ಕಾರ್ಕಳ, ಕಾಪು ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಡಿಸುವ ದಿನ ಡಿ.7 ಆಗಿದ್ದು, ನಾಮಪತ್ರ ಸಲ್ಲಿಕೆಗೆ ಡಿ.11 ಕೊನೆಯ ದಿನ. ನಾಮಪತ್ರ ಪರಿಶೀಲನೆ ಡಿ.12, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿ.14 ಕೊನೆಯ ದಿನ, ಮತದಾನದ ಅವಶ್ಯಕತೆ ಇದ್ದರೆ ಡಿ.22ರಂದು ಬೆಳಿಗ್ಗೆ 7ರಿಂದ ಸಾಯಂಕಾಲ 5ರ ತನಕ ಮತದಾನ ನಡೆಯಲಿದೆ. ಮತ ಎಣಿಕೆ ತಾಲೂಕು ಕೇಂದ್ರಗಳಲ್ಲಿ ಡಿ.30ರಂದು ನಡೆಯಲಿದೆ.

ಎರಡನೇ ಹಂತದ ಚುನಾವಣೆಗೆ ಡಿ.11ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಡಿ.16 ಕೊನೆಯ ದಿನ. ನಾಮಪತ್ರ ಪರಿಶೀಲನೆ ಡಿ.17, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿ.19 ಕೊನೆಯ ದಿನ, ಮತದಾನದ ಅವಶ್ಯಕತೆ ಇದ್ದರೆ ಡಿ.27 ಭಾನುವಾರ ಬೆಳಿಗ್ಗೆ 7ರಿಂದ ಸಾಯಂಕಾಲ 5ರ ತನಕ ಮತದಾನ ನಡೆಯಲಿದೆ. ಮತ ಎಣಿಕೆ ತಾಲೂಕು ಕೇಂದ್ರಗಳಲ್ಲಿ ಡಿ.30 ಬುಧವಾರ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!