spot_img
Wednesday, March 11, 2026
spot_img

ಯಕ್ಷಗಾನ ಕಲಾವಿದ ಐರ್ ಬೈಲ್ ಆನಂದ ಶೆಟ್ಟಿಯವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ, ಮಾರಣಕಟ್ಟೆ ಒಂದೇ ಮೇಳದಲ್ಲಿ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಗ್ರಪಂಕ್ತಿಯ ಕಲಾವಿದ ಐರ್ ಬೈಲ್ ಆನಂದ ಶೆಟ್ಟಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

‘ಬಯಲಾಟದ ದೊರೆ’ ಎಂದೇ ಖ್ಯಾತಿ ಪಡೆದ ಇವರು ಸುದೀರ್ಘ ಒಂದೇ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವುದು ವಿಶೇಷವಾಗಿದೆ. ಮಾರಣಕಟ್ಟೆ ಕ್ಷೇತ್ರ ಮಹಾತ್ಮೆಯ ಕಂಹಾಸುರ ಪಾತ್ರ ಅವರಿಗೆ ಪ್ರಸಿದ್ಧಿ ತಂದುಕೊಟ್ಟಿದೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರ ಸಾಧನೆ, ಪ್ರತಿಭೆಗೆ ಯೋಗ್ಯವಾಗಿಯೇ ಸಂದಿವೆ.

ಕುಂದಾಪುರ ತಾಲೂಕು ಸಿದ್ದಾಪುರ ಸಮೀಪದ ಐರ್ ಬೈಲು ಎನ್ನುವ ಹಳ್ಳಿಯಲ್ಲಿ ಜನಿಸಿದ ಅವರು ಪ್ರಸ್ತುತ ಬಂಟ್ವಾಡಿಯಲ್ಲಿ ನೆಲೆಸಿದ್ದಾರೆ. ಜೋಡಾಟ ಪ್ರಸಿದ್ಧಿಯ ಕಾಲಘಟ್ಟದಲ್ಲಿ ಜೋಡಾಟದ ಹುಲಿ ಎಂದೇ ಕರೆಸಿಕೊಂಡ ಇವರು, ಎಲ್ಲಾ ರೀತಿಯ ಪುರುಷ ಪಾತ್ರಗಳಲ್ಲೂ ಮಿಂಚಿದ್ದಾರೆ. ಪೌರಾಣಿಕ ಹಾಗೂ ಸಾಮಾಜಿಕ, ಐತಿಹಾಸಿಕ ಪ್ರಸಂಗಗಳ ಪಾತ್ರದಲ್ಲೂ ಛಾಪು ಮೂಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!