spot_img
Saturday, April 25, 2026
spot_img

ಯಕ್ಷಗಾನ ಕಲಾವಿದ ಕೋಟ ಸುರೇಶ ಬಂಗೇರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಬಡಗುತಿಟ್ಟು ಯಕ್ಷಗಾನ ರಂಗದ ಪರಂಪರೆಯ ಕಲಾವಿದ, ಯಕ್ಷರಂಗದಲ್ಲಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಸುಧನ್ವ ಖ್ಯಾತಿಯ ಕೋಟ ಸುರೇಶ ಬಂಗೇರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಕೋಟದ ಅಮೃತೇಶ್ವರಿ ಮೇಳದ ಪ್ರಧಾನ ಕಲಾವಿದರಾಗಿರುವ ಇವರು ಹಲವು ವೃತ್ತಿಪರ ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ. ಮಂದಾರ್ತಿ ಮೇ, ಸೌಕೂರು ಮೇಳ, ಸಾಲಿಗ್ರಾಮ, ಪೆರ್ಡೂರು ಮೇಳ, ಕಮಲಶಿಲೆ ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ.

ಮಣೂರು-ಪಡುಕೆರೆಯಲ್ಲಿ ೧೯೬೫ರಲ್ಲಿ ಬೇಡು ಮರಕಾಲ ಮತ್ತು ಅಕ್ಕಮ್ಮ ದಂಪತಿಯ ಮಗನಾಗಿ ಜನಿಸಿದ ಸುರೇಶ ಬಂಗೇರರು ೧೬ನೇ ವಯಸ್ಸಿನಲ್ಲಿ ಮಂದಾರ್ತಿ ಮೇಳದಲ್ಲಿ ಗೆಜ್ಜೆ ಕಟ್ಟಿದರು. ಪ್ರಸ್ತುತ ಪತ್ನಿ ಸುಶೀಲಾ, ಮಕ್ಕಳಾದ ಸುರಕ್ಷಾ ಮತ್ತು ಸಮರ್ಥರೊಂದಿಗೆ ಕೋಟ ಪಡುಕೆರೆಯಲ್ಲಿ ವಾಸವಾಗಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!