spot_img
Wednesday, March 11, 2026
spot_img

 ಜಾವೆಲಿನ್ ಎಸೆತ; ಸುಜ್ಞಾನ ಪಿಯು ಕಾಲೇಜಿನ ಸಮಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ  ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ  ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಎಚ್. ಎಂ ಜಾವೆಲಿನ್ ಎಸೆತದಲ್ಲಿ  ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಮಿತ್ ಎಚ್. ಎಂ ತೀರ್ಥಹಳ್ಳಿಯ ಮಂಜುನಾಥ ಮತ್ತು ಸ್ಮಿತ ದಂಪತಿಯ ಪುತ್ರ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!