spot_img
Wednesday, March 11, 2026
spot_img

ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಸಂಭ್ರಮದ ೭೦ನೇ ಕನ್ನಡ ರಾಜ್ಯೋತ್ಸವ

ಕಿರಿಮಂಜೇಶ್ವರ : ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕನ್ನಡದ ಜ್ಯೋತಿ ಬೆಳಗುವುದರ ಮೂಲಕ ಕನ್ನಡ ಮನಸುಗಳೆಲ್ಲ ಒಂದಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಣೇಶ ಮೊಗವೀರ ಅವರು ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಯೋಜಕರಾದಂತ ಸುಬ್ರಹ್ಮಣ್ಯ ಮರಾಠಿ ಇವರು ಉಪಸ್ಥಿತರಿದ್ದರು. ಈ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ’ಜನತಾ ಚಿತ್ರ ಸಿರಿ’ ಎನ್ನುವಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಬಿಡಿಸಿದಂತಹ ಚಿತ್ರಗಳನ್ನು ಪ್ರದರ್ಶಿಸಿ, ಅತ್ಯುತ್ತಮ ಚಿತ್ರಗಳಿಗೆ ಮುಂದೆ ನಡೆಯುವಂತಹ ಜನತಾ ವ್ಯವಹಾರ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಕನ್ನಡ ನಾಡು ನುಡಿಗಳನ್ನು ಬಿಂಬಿಸುವಂತಹ ಗೀತೆಗಳಿಗೆ ದನಿಯಾದರು. ಶಿಕ್ಷಕಿ ಕುಮಾರಿ ಶ್ವೇತಾ ಅವರು ಕನ್ನಡ ನಾಡು ನುಡಿಯ ಕುರಿತಾದ ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಶಿಕ್ಷಕಿಯರಾದ ಸುಜಾತ ಅವರು ಸ್ವಾಗತಿಸಿ ಶಶಿಕಲಾ ಕಾರ್ಯಕ್ರಮವನ್ನು ನಿರೂಪಿಸಿ ಶಾಂಭವಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!