spot_img
Saturday, April 25, 2026
spot_img

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆ: ೭೦ನೇ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಧ್ವಜಾರೋಹಣಗೈದು, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ  ಪ್ರಮೀಳಾ ಡಿಸೋಜರವರು ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೈದರು.

ಪ್ರಾಥಮಿಕ ವಿಭಾಗದ ಶಿಕ್ಷಕಿ  ವಂದನಾ  ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಆರಾಧ್ಯ ಕೆ.ಬಿ , ಶ್ರಾವ್ಯ ಎಸ್. ಪೂಜಾರಿ ರಾಜ್ಯೋತ್ಸವದ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿನಿಯರು ಕನ್ನಡ ಹಾಡುಗಳನ್ನು ಹಾಡಿದರು. ಪ್ರೌಢ ಶಾಲಾ ಶಿಕ್ಷಕಿ ರೇಖಾ ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿ, ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿ ಅಶ್ವಿನಿ ವಂದಿಸಿದರು. ಈ ಸಮಾರಂಭದಲ್ಲಿ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!