spot_img
Wednesday, November 19, 2025
spot_img

ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ರಾಜ್ಯೋತ್ಸವ ಪ್ರದಾನ

ಕುಂದಾಪುರ, ನ. ೧: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿಯವರು ನವೆಂಬರ್ ೦೧ ರ ಶನಿವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ೨೦೨೫ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ್ ಪ್ರದಾನ ಮಾಡಿದರು.

ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸ್ವರೂಪಾ. ಟಿ ಕೆ ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್ ಪಾಲ್ ಸುವರ್ಣ ವಹಿಸಿದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷರಾದ ಎಂ ಎ ಗಪೂರ್, ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕೊಡವೂರು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ ಶಂಕರ್ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!