spot_img
Wednesday, November 19, 2025
spot_img

ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುಂದಾಪುರ: ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ, ಅಂಪಾರಿನಲ್ಲಿ ನವೆಂಬರ್ ೧, ೨೦೨೫ ರಂದು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ನಾಡು, ನುಡಿ, ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವಂತಹ ವಾತಾವರಣವನ್ನು ಸೃಷ್ಟಿಸಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಇವರು ವಹಿಸಿದ್ದರು. ಕಾರ್ಯಕ್ರಮವನ್ನು ಹೈದರಾಬಾದ್‌ನ ಹೋಟೆಲ್ ಉದ್ಯಮಿ ಶೇಖರ್ ಶೆಟ್ಟಿ ವಂಡ್ಸೆ ಅವರು ಉದ್ಘಾಟಿಸಿದರು. ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್‌ಚಂದ್ರ ಶೆಟ್ಟಿ, ನಿರ್ದೇಶಕ ಉಮೇಶ್ ಕೊಠಾರಿ ಮುಂತಾದವರು ಉಪಸ್ಥಿತರಿದ್ದರು.

ಅತಿಥಿಗಳು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕರ್ನಾಟಕದ ಏಕೀಕರಣದ ಕುರಿತು ಮಾತನಾಡಿದರು.ಬಳಿಕ ವಿದ್ಯಾರ್ಥಿಗಳು ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಶಾಲಾ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಸ್ವಾಗತಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!