spot_img
Saturday, April 25, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2025′ ಸಂಪನ್ನ

ಕುಂದಾಪುರ : ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು
ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-೨೦೨೫ರ
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪ-
ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂ‌ಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು.

ಕಾಲೇಜಿನ ಐಕ್ಯೂ‌ಎಸಿ ಸಂಯೋಜಕಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಅತಿಥಿಗಳನ್ನು ಪರಿಯಿಸಿದರು. ಆಡಳಿತ
ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಸ್ವಾಗತಿಸಿ, ನಿರೂಪಿಸಿದರು.

ಪಿಯು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅನಿಸಿಕೆ ಹಂಚಿಕೊಂಡರು.

ಒಟ್ಟು ೧೬ ತಂಡಗಳು ಭಾಗವಹಿಸಿದ್ದು, ಎಕ್ಸಲೆಂಟ್ ಪಿಯು ಕಾಲೇಜು, ಸುಣ್ಣಾರಿ ಪ್ರಥಮ, ವೆಂಕಟರಮಣ ಪಿಯು ಕಾಲೇಜು ದ್ವಿತೀಯ
ಸ್ಥಾನ ಪಡೆಯುವ ಮೂಲಕ ಸಮಗ್ರ ಪುರಸ್ಕಾರ ಮತ್ತು ನಗದು ಬಹುಮಾನ ಪಡೆದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!