spot_img
Wednesday, March 11, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಕ್ಟರಿ – 2025’  

ಕುಂದಾಪುರ : ನವೆಂಬರ್ 07  ರಂದು   ಶ್ರೀ ವೆಂಕಟರಮಣ  ಪದವಿ ಪೂರ್ವ  ಕಾಲೇಜಿನಲ್ಲಿ  9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ  ಸಾಂಸ್ಕೃತಿಕ  ಸ್ಪರ್ಧೆ ‘ವಿಕ್ಟರಿ-2025’ ಕಾಲೇಜು ಆಡಿಟೋರಿಯಂನಲ್ಲಿ ಜರುಗಿತು.
  ದೀಪ ಪ್ರಜ್ವಲನೆಯ  ಮೂಲಕ ಕಾರ್ಯಕ್ರಮಕ್ಕೆ  ಚಾಲನೆ ನೀಡಿದ  ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ಉಪ ಪ್ರಾಂಶುಪಾಲರಾದ  ಡಾ. ಚೇತನ್ ಶೆಟ್ಟಿ  ಕೋವಾಡಿ ಮಾತನಾಡಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆಗೊಂಡ ಈ ಸಾಂಸ್ಕೃತಿಕ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಗೆದ್ದರೆ  ಆತ್ಮವಿಶ್ವಾಸ ಮೂಡಿಸುತ್ತದೆ ನಿಜ  ಆದರೆ  ಸೋತರೇ ಹತಾಶರಾಗಬೇಡಿ.  ನಿಮ್ಮ ಭವಿಷ್ಯದ ಹಾದಿಗೆ ಈ ಸ್ಪರ್ಧೆ ಮಹತ್ವದ ಮೈಲುಗಲ್ಲು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ  ಕೆ. ರಾಧಾಕೃಷ್ಣ ಶೆಣೈಯವರು ವಿದ್ಯಾರ್ಥಿಗಳಿಗೆ  ಶುಭ ಹಾರೈಸಿದರು.
 ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾ‌ರ್, ಹಿರಿಯ ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್ , ಶ್ರೀ ವೆಂಕಟರಮಣ  ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ಕೃಷ್ಣ ಅಡಿಗ, ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ  ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ, ಕಲಾತ್ಮಕ ಹಾಗೂ ನಾಯಕತ್ವದ ಕೌಶಲ್ಯ ಪ್ರದರ್ಶಿಸಲು ಒಂದು ಉತ್ತಮ ವೇದಿಕೆ ಕಲ್ಪಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಕಾಲೇಜು ಹಮ್ಮಿಕೊಂಡಿದೆ.
ಒಟ್ಟು 8 ವಿಧದ ಸ್ಪರ್ಧೆಗಳು ಈ ಕಾರ್ಯಕ್ರಮದಲ್ಲಿದ್ದು ಶಾಲಾ ವಿದ್ಯಾರ್ಥಿಗಳ ಕುಶಲತೆಗೆ ಇಂಬು ನೀಡುವಂತೆ ರೂಪಿಸಲಾದ ಈ ಸ್ಪರ್ಧೆಗೆ  27 ಶಾಲೆಗಳಿಂದ    ವಿದ್ಯಾರ್ಥಿಗಳು ಭಾಗವಹಿಸಿದ್ದರು.
  ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ  ಚಾಂಪಿಯನ್ ಸ್ಥಾನ ವನ್ನು ಅಲಂಕರಿಸಿದರೆ,   ಸಂದೀಪನ್ ಆಂಗ್ಲ ಮಾದ್ಯಮ ಶಾಲೆ ಕಂಬದಕೋಣೆ  ದ್ವಿತೀಯ ಸ್ಥಾನ, ಸೇಕ್ರೆಡ್ ಹಾರ್ಟ್  ಸ್ಕೂಲ್ ಜಡ್ಕಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿತು.  ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 15,555 ರೂ. ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ 11,111 ರೂ. ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನವಾಗಿ 7, 777 ರೂ. ನಗದು ಹಾಗೂ ಟ್ರೋಫಿ ವಿತರಿಸಲಾಯಿತು.
 ಕಂಪ್ಯೂಟರ್ ಸೈನ್ಸ್ ಉಪನ್ಯಾಸಕಿ  ಸೌಮ್ಯ ಕುಂದರ್  ಅತಿಥಿಗಳನ್ನು ಪರಿಚಯಿಸಿ, ಪ್ರಾಂಶುಪಾಲರಾದ  ಸಂದೀಪ್ ಗಾಣಿಗ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!