spot_img
Wednesday, March 11, 2026
spot_img

ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರಿನಲ್ಲಿ ಮಕ್ಕಳ ಆರೋಗ್ಯ ಸಂರಕ್ಷಣಾ ಕಾರ್ಯಾಗಾರ

ಕುಂದಾಪುರ: ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಂಪಾರು ಇದರ ವತಿಯಿಂದ ಅಂಪಾರಿನ ಸಂಜಯ ಗಾಂಧಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಮಹತ್ವ ಕುರಿತು ಅತ್ಯಂತ ಯಶಸ್ವಿ ಮತ್ತು ಮಾಹಿತಿಪೂರ್ಣ ಜಾಗೃತಿ ಕಾರ್ಯಕ್ರಮವನ್ನು ೬ ನವೆಂಬರ್ ೨೦೨೫ ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮತ್ತು ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ನಿವೃತ್ತ ಅರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಮಕ್ಕಳ ಆರೋಗ್ಯದ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಿದರು. “ಉತ್ತಮ ಆರೋಗ್ಯ ಅಥವಾ ಯೋಗಕ್ಷೇಮ ಎಂದರೆ ಕೇವಲ ದೈಹಿಕವಾಗಿ ಮಾತ್ರವಲ್ಲದೆ, ಮಾನಸಿಕ ಮತ್ತು ಸಾಮಾಜಿಕವಾಗಿಯೂ ಆರೋಗ್ಯವಾಗಿರುವುದು” ಎಂದು ಅವರು ನುಡಿದರು.

ಡಾ. ಉಡುಪ ಅವರು ಆರೋಗ್ಯಕರ ಸಮತೋಲಿತ ಆಹಾರ, ವೈಯಕ್ತಿಕ ಸ್ವಚ್ಛತೆ ಮತ್ತು ಉತ್ತಮ ಜೀವನಶೈಲಿಯ ಮಹತ್ವವನ್ನು ಸರಳ ಉದಾಹರಣೆಗಳೊಂದಿಗೆ ವಿವರಿಸಿದರು. ಪೋಷಕರು ಮಕ್ಕಳ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶಯುಕ್ತ ತರಕಾರಿಗಳು ಮತ್ತು ಹಣ್ಣುಗಳನ್ನು ಸೇರಿಸುವ ಅಗತ್ಯದ ಬಗ್ಗೆ ತಿಳುವಳಿಕೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಕೋಶಾಧಿಕಾರಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಇಂತಹ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು, ಆಗ ಮಾತ್ರ ಸಮಾಜದಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯ ಎಂದರು.

ಶಾಲೆಯ ಆಡಳಿತಾಧಿಕಾರಿ ಶ್ರೀಮತಿ ಚೈತ್ರಾ ಯಡಿಯಾಳ ಮಾತನಾಡಿ, ಮಕ್ಕಳಲ್ಲಿ ಆರೋಗ್ಯಕರ ಜೀವನಶೈಲಿ, ಸ್ವಚ್ಛತೆ ಮತ್ತು ಸಮತೋಲಿತ ಆಹಾರದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ವಿಲಾಸಿನಿ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದ ಯಶಸ್ಸಿನಲ್ಲಿ ಪೋಷಕರ ಸಕ್ರಿಯ ಪಾಲ್ಗೊಳ್ಳುವಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮಕ್ಕಳು ಮತ್ತು ಪೋಷಕರು ಈ ಕಾರ್ಯಕ್ರಮದ ನೇರ ಫಲಾನುಭವಿಗಳಾಗಿದ್ದು, ಆರೋಗ್ಯದ ಬಗ್ಗೆ ಉಪಯುಕ್ತ ಮಾಹಿತಿ ಪಡೆದುಕೊಂಡರು. ಸ್ಥಳೀಯ ಆಶಾ ಕಾರ್ಯಕರ್ತೆ ಸುಕನ್ಯಾ ಕಿಣಿ ಇವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!