spot_img
Tuesday, March 10, 2026
spot_img

ಹೆಮ್ಮಾಡಿ ಜನತಾ ವಿದ್ಯಾಸಂಸ್ಥೆಯಲ್ಲಿ ನ.12ರಿಂದ ನ.14ರ ತನಕ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ 14ರ ವಯೋಮಿತಿ ಒಳಗಿನ ಹಾಗೂ 17 ವಯೋಮಿತಿಯ ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ನವಂಬರ್ 12, 13 ಮತ್ತು 14ರಂದು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು, ಹೆಮ್ಮಾಡಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜನತಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ್ ತಿಳಿಸಿದರು.

ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.12ರ ಬೆಳ್ಳಿಗೆ 9.30 ಕ್ಕೆ ಹೆಮ್ಮಾಡಿ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಕಾಲೇಜಿನ ಕ್ರೀಡಾಂಗಣದವರೆಗೆ ವೈಭವದ ಮೆರವಣಿಗೆ ನಡೆಯಲ್ಲಿದ್ದು, ನಂತರ ಗಣ್ಯರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲೆಯ 5 ಶೈಕ್ಷಣಿಕ ವಲಯ (ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾರ್ಕಳ) ಮಟ್ಟದಲ್ಲಿ ಪ್ರಥಮ, ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನ.14ರಂದು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾ ಕೂಟ ನಡೆಯಲಿದೆ. ಅಂದು ಸಮರೋಪ ಸಮಾರಂಭ ನಡೆಯಲಿದೆ ಎಂದರು.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮಾತನಾಡಿ, ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರಿಗೆ 100 ಮೀಟರ್ ಓಟ, 200 ಮೀಟರ್ ಓಟ, 400 ಮೀಟರ್ ಓಟ, 600 ಮೀಟರ್ ಓಟ, 800 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಚಕ್ರ ಎಸೆತ, 4X100 ಮೀಟರ್ ರಿಲೇ ಓಟ ಸ್ಪರ್ಧೆಗಳು ಇರಲಿದೆ.
17 ವರ್ಷ ವಯೋಮಿತಿಯ ಬಾಲಕರು-ಬಾಲಕಿಯರಿಗೆ 100 ಮೀಟರ್ ಓಟ, 200 ಮೀಟರ್ ಓಟ, 400 ಮೀಟರ್ ಓಟ, 800 ಮೀಟರ್ ಓಟ, 1500 ಮೀಟರ್ ಓಟ, 3000 ಮೀಟರ್ ಓಟ, 110 ಮೀಟರ್ ಹರ್ಡಲ್ಸ್, 400 ಮೀಟರ್ ಹರ್ಡಲ್ಸ್, 4X100 ಮೀಟರ್ ರಿಲೇ ಓಟ, 4X100 ಮೀಟರ್ ರಿಲೇ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿದ ಜಿಗಿತ, ಪೋಲ್ ವಾಲ್ಟ್, ಗುಂಡು ಎಸೆತ, ಚಕ್ರ ಎಸೆತ ಈಟಿ ಎಸೆತ, ಹ್ಯಾಮರ್ ಎಸೆತ, 5 ಕಿ.ಮೀ ನಡಿಗೆ (ಹುಡುಗರಿಗೆ), 3 ಕಿ.ಮೀ ನಡಿಗೆ ಹುಡುಗಿಯರಿಗೆ ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗೆ ಅವರ ಸಾಮಾಥ್ರ್ಯನುಸಾರ ಸ್ಪರ್ಧೆಗಳು ನಡೆಯಲಿದೆ ಎಂದರು.

ಇಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ 14 ವರ್ಷ ವಯೋಮಿತಿಯ ವಿದ್ಯಾರ್ಥಿಗಳು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. 17 ವರ್ಷ ವಯೋಮಿತಿಯ ವಿದ್ಯಾರ್ಥಿಗಳು ಬಾಗಲಕೋಟದಲ್ಲಿ ನಡೆಯುವ ರಾಜ್ಯಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದರು.

ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಮಾತನಾಡಿ, ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಕೆಯೊಂದಿಗೆ ಕ್ರೀಡೆ, ಸಾಂಸ್ಕøತಿಕ ವಿಕಾಸನಕ್ಕೂ ಒತ್ತು ನೀಡಲಾಗುತ್ತಿದೆ. ಕಳೆದ ವರ್ಷ ನಮ್ಮ ಸಂಸ್ಥೆಯ 50 ವಿದ್ಯಾರ್ಥಿ ರಾಜ್ಯ ಮಟ್ಟ, 5 ವಿದ್ಯಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ಬಾರಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ನಮ್ಮ ಸಂಸ್ಥೆಯಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಬಾರಿಯ ಜಿಲ್ಲಾ ಮಟ್ಟದ ಕ್ರೀಡಾಕೂಟದ ಆತಿಥ್ಯ ನಮ್ಮ ಸಂಸ್ಥೆಗೆ ದೊರಕಿದ್ದು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಉಪನ್ಯಾಸಕ ನಾಗರಾಜ ಅಲ್ತಾರು, ನ್ಯೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ದೇವಾಡಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!