spot_img
Tuesday, March 10, 2026
spot_img

ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ  ‘ ನಮ್ಮ ಕುಡ್ಲ ಸಾಧಕ  ಪ್ರಶಸ್ತಿ ‘ ಪ್ರದಾನ

ಮಂಗಳೂರು:   ತುಳು ವಾರ್ತಾ ವಾಹಿನಿ ‘ ನಮ್ಮ ಕುಡ್ಲ ‘ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ಗೂಡುದೀಪ ಪಂಥ -2025ರ ಸಮಾರೋಪ  ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಯನ್ನು  ನೀಡಿದ್ದು  , ಈ ಪ್ರತಿಷ್ಠಿತ ಪ್ರಶಸ್ತಿಯನ್ನು  ಸಹಕಾರ ರಂಗದ ಧೀಮಂತ ನಾಯಕ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ ಎಂ.ಎನ್ ರಾಜೇಂದ್ರಕುಮಾರ್ ಅವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಸೋಮವಾರ  ( ನವೆಂಬರ್ -10) ಪ್ರದಾನ ಮಾಡಲಾಯಿತು.

ಕರಾವಳಿ ಕರ್ನಾಟಕದ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಡಾ . ಎಂ. ರಾಜೇಂದ್ರ ಕುಮಾರ್ ಅವರು ಸಹಕಾರ ರಂಗದಲ್ಲಿ ಕಳೆದ 45 ವರ್ಷಗಳಿಂದ ವಿವಿಧ ಸಹಕಾರಿ ಸಂಘ/ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ್ನು 31 ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ . ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ  113 ಶಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿ  ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು  ನೀಡುತ್ತಿದೆ. ರಾಜೇಂದ್ರ ಕುಮಾರ್ ಅವರ ದಕ್ಷ  ನಾಯಕತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿಗೆ 23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 19 ಬಾರಿ ನಬಾರ್ಡ್ ಪ್ರಶಸ್ತಿ  ಸೇರಿದಂತೆ ಹಲವಾರು ಉನ್ನತ ಪ್ರಶಸ್ತಿಗಳು ಲಭಿಸಿವೆ.

‘ ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಯನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ನಮ್ಮ ಕುಡ್ಲ ವಾರ್ತಾ ವಾಹಿನಿಯ ಮುಖ್ಯಸ್ಥರಾದ ಲೀಲಾಕ್ಷ ಕರ್ಕೇರ ಅವರು ತಮ್ಮ ಬಳಗದ ಜೊತೆಯಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಉದ್ಯಮಿಗಳಾದ ಲಕ್ಷ್ಮೀಶ ಭಂಡಾರಿ , ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!