spot_img
Tuesday, March 10, 2026
spot_img

ಹಿರಿಯ ಸಹಕಾರಿ ಧುರೀಣ ಕೆ.ಕೊರಗ ಪೂಜಾರಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಾಧಕ ಸಹಕಾರಿಗಳಿಗೆ ಕೊಡಮಾಡುವ 2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಕೋಟ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ಬ್ರಹ್ಮಾವರ ತಾಲೂಕಿನ ಕೆ.ಕೊರಗ ಪೂಜಾರಿ ಕೋಡಿ ಹೊಸಬೆಟ್ಟು ಇವರಿಗೆ ಲಭಿಸಿದೆ.

ನ.14ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕೋಟ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಕೊರಗ ಪೂಜಾರಿ ಅವರು ಬಾಲ್ಯದಿಂದ ಇಂದಿನ ತನಕವೂ ಅವರು ಸಾರ್ವಜನಿಕ ಸೇವೆಯಲ್ಲಿ ಗುರುತಿಸಿಕೊಂಡವರು. ಮೂರ್ತೆದಾರರ ಚಳವಳಿಯಲ್ಲಿ ಗುರುತಿಸಿಕೊಂಡ ಇವರು ಇಂದಿಗೂ ಕೂಡಾ ಮೂರ್ತೆದಾರರ ನಾಯಕರಾಗಿ ಮುಂದುವರಿಯುತ್ತಿದ್ದಾರೆ. ಕೃಷಿಕರಾಗಿ, ಧಾರ್ಮಿಕ ಮುಂದಾಳುವಾಗಿಯೂ ಇವರು ಚಿರಪರಿಚಿತರು. ಸಹಕಾರ, ಸಾಮಾಜಿಕ ವ್ಯವಸ್ಥೆಯಲ್ಲಿ ದಣಿವರಿಯದೆ ದುಡಿಯುತ್ತಿರುವ ಹಿರಿಯರಾದ ಕೆ.ಕೊರಗ ಪೂಜಾರಿ ಅವರ ಸಾಧನೆಗೆ ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!