spot_img
Monday, March 16, 2026
spot_img

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಭೇಟಿ

ಕೋಟ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ಅಧ್ಯಕ್ಷರಾದ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್(ರಿ.), ಮಂಗಳೂರು ಇದರ ಮೆನೇಜಿಂಗ್ ಟ್ರಸ್ಟಿ ಆಗಿರುವ ಡಾ| ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಸುನೀಲ್ ಬಜಗೋಳಿ ಇವರು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನ.12ರಂದು ಭೇಟಿ ನೀಡಿದರು.

ಈ ಸಂದರ್ಭ ಅವರನ್ನು ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಇವರು ಸ್ವಾಗತಿಸಿ, ಸಂಘದ ವ್ಯವಹಾರ ಅಭಿವೃದ್ಧಿ, ಸಂಘದ ಯೋಜನೆಗಳು, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರು ಮತ್ತು ನಿರ್ದೇಶಕರು ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಅವರನ್ನು ಸಂಘದ ಪರವಾಗಿ  ಸನ್ಮಾನಿಸಲಾಯಿತು.

ಸಂಘದ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ಸಕಲ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು. ಈ ಸಂದರ್ಭ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!