spot_img
Monday, March 16, 2026
spot_img

ಸಹಕಾರಿ ಧುರೀಣ ಬಾರಕೂರು ಶಾಂತಾರಾಮ ಶೆಟ್ಟಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಹಕಾರ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಬಾರಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಾರಕೂರು ಶಾಂತಾರಾಮ ಶೆಟ್ಟಿ ಅವರಿಗೆ ಲಭಿಸಿದೆ.

ನ.14ರಂದು ಬೆಂಗಳೂರಿನ ಗಾಯತ್ರಿ ವಿಹಾರ್, ಫ್ಯಾಲೆಸ್ ಗ್ರೌಂಡ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬಿ.ಶಾಂತಾರಾಮ ಶೆಟ್ಟಿಯವರು ಸಾಮಾಜಿಕ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಸಹಕಾರ ಕ್ಷೇತ್ರದಲ್ಲಿ ಅವರು ಬಾರಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಯಲ್ಲಿ ಶ್ರಮಿಸಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಪ್ರಸಿದ್ಧರಾದ ಅವರಿಗೆ ಇತ್ತೀಚೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!