spot_img
Friday, January 30, 2026
spot_img

ಉಡುಪಿ ಜಿಲ್ಲೆಯಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಭಾರತದಾದ್ಯಂತ ನವೆಂಬರ್ 14ರಿಂದ 20ರವರೆಗೆ ಆಚರಿಸಲಾಗುತ್ತದೆ. ಈ ಬಾರಿಯ ಸಹಕಾರ ಸಪ್ತಾಹದ ಧ್ಯೇಯ ವಾಕ್ಯ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು”ಎಂಬುದಾಗಿದೆ. ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಸಹಕಾರ ಸಪ್ತಾಹವನ್ನು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ನವೆಂಬರ್ 14ರಿಂದ 20ರವರೆಗಿನ ಏಳು ದಿನಗಳ ಸಹಕಾರ ಸಪ್ತಾಹದ ಆಚರಣೆಯಲ್ಲಿ, ಒಂದೊಂದು ದಿನಕ್ಕೆ ಒಂದೊಂದು ಮಹತ್ವ ನೀಡಿ ಅದನ್ನು ಆಯಾಯ ದಿನದ ಪ್ರಮುಖ ವಿಷಯವನ್ನಾಗಿಸಿಕೊಂಡು ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಮಾರ್ಗದರ್ಶನದಂತೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಬಲ್ಲಾಳ್, ಆಡಳಿತ ಮಂಡಳಿ ನಿರ್ದೇಶಕರಾದ ಯಶ್‍ಪಾಲ್ ಎ.ಸುವರ್ಣ, ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು, ಹೆಚ್. ಗಂಗಾಧರ ಶೆಟ್ಟಿ, ಎ. ಹರೀಶ್ ಕಿಣಿ, ಶ್ರೀಧರ್ ಪಿ.ಎಸ್, ಸುಧೀರ್ ವೈ, ಅನಿಲ್ ಎಸ್. ಪೂಜಾರಿ, ಶ್ರೀ ಪ್ರಸಾದ್ ಎಸ್ ಶೆಟ್ಟಿ, ಎನ್ .ಮಂಜಯ್ಯ ಶೆಟ್ಟಿ, ಪ್ರದೀಪ್ ಯಡಿಯಾಳ್, ಬಿ. ಅರುಣ್ ಕುಮಾರ್ ಹೆಗ್ಡೆ, ಬಿ.ಕರುಣಾಕರ ಶೆಟ್ಟಿ, ಶ್ರೀ ಕೆ.ಸುರೇಶ್ ರಾವ್, ಎಂ.ಗೋಪಿಕೃಷ್ಣ ರಾವ್ ಹಾಗೂ ಹಿರಿಯ ಸಹಕಾರಿ ಮುಖಂಡರು, ನಾಯಕರು, ಸದಸ್ಯರು, ಗಣ್ಯರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಸಹಕಾರ ಚಳುವಳಿಯ ಅರ್ಥ, ಮಹತ್ವ, ತತ್ವಗಳ ಔಚಿತ್ಯ, ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ. ಜನರು ಸಹಕಾರ ತತ್ವಗಳನ್ನು ಅರ್ಥಮಾಡಿಕೊಂಡು ಅದನ್ನು ಜೀವನ ವಿಧಾನವನ್ನಾಗಿ ಮಾಡಿಕೊಳ್ಳಲು, ನೆಮ್ಮದಿಯ ಜೀವನ ನಡೆಸಲು ಹಾಗೂ ಉತ್ತಮ ಮಾರ್ಗ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಸಪ್ತಾಹದ ಆಚರಣೆಯಲ್ಲಿ ತೆಗೆದುಕೊಂಡ ವಿಚಾರಗಳು ಆಯಾಯ ವರ್ಷದ ಅವಶ್ಯಕ ವಿಷಯಗಳು ಹಾಗೂ ಸಹಕಾರ ಕ್ಷೇತ್ರದ ವಿವಿಧ ಚಿಂತನೆಗಳನ್ನು ಒಳಗೊಂಡಿರುತ್ತದೆ.

ಸಹಕಾರ ಸಪ್ತಾಹವನ್ನು ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೇತೃತ್ವದಲ್ಲಿ ಜಿಲ್ಲಾ ಸಹಕಾರ ಯೂನಿಯನ್‍ಗಳು ಹಾಗೂ ಸಹಕಾರ ಸಂಸ್ಥೆಗಳ ಬೆಂಬಲದಿಂದ ಆಚರಿಸಲಾಗುತ್ತದೆ. ಸಪ್ತಾಹದ ಆಚರಣೆಯು ಸಹಕಾರ ಚಳುವಳಿಗೆ ಪೂರಕವಾಗಿದ್ದು, ಅಧಿಕ ಸಂಖ್ಯೆಯಲ್ಲಿ ಸಹಕಾರಿಗಳು ಪಾಲ್ಗೊಂಡು ಸಪ್ತಾಹವನ್ನು ಯಶಸ್ವಿಗೊಳಿಸುವುದು ಎಲ್ಲಾ ಸಹಕಾರಿಗಳ ಜವಾಬ್ದಾರಿಯಾಗಿರುತ್ತದೆ. ಸಪ್ತಾಹದ ಅವಧಿಯಲ್ಲಿ ಪ್ರತಿಯೊಂದು ಸಹಕಾರ ಸಂಘದ ಕಛೇರಿಯ ಆವರಣದಲ್ಲಿ ಏಳು ಬಣ್ಣಗಳ ಸಹಕಾರ ಧ್ವಜವನ್ನು ಹಾರಿಸಲಾಗುವುದು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಸಹಕಾರ ಪ್ರಚಾರ ರಥವನ್ನು 7 ದಿನಗಳ ಕಾಲ ಸಹಕಾರ ಸಪ್ತಾಹ ನಡೆಯುವ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ.

ಸಹಕಾರ ಕ್ಷೇತ್ರದಲ್ಲಿರುವವರೆಲ್ಲರೂ ಒಂದೆಡೆ ಸೇರಿ ಸಹಕಾರ ಚಳವಳಿಯ ಸಾಧನೆ ಮತ್ತು ವೈಫಲ್ಯಗಳನ್ನು ವಿಮರ್ಶಿಸಿ, ಮುಂದಿನ ವರ್ಷಕ್ಕೆ ಗುರಿಯನ್ನು ಇರಿಸಿಕೊಂಡು ಅದನ್ನು ಸಾಧಿಸಲು ಕೈಗೊಳ್ಳಬೇಕಾದ ಕ್ರಮಗಳಬಗ್ಗೆ ಚಿಂತನೆಯನ್ನು ನಡೆಸಬೇಕೆಂಬುವುದು ಇದರ ಉದ್ದೇಶವಾಗಿರುತ್ತದೆ.

ನ. 14ರಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಯಲ್ಲಿ ಆಯಾ ಸಂಘದ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ವರ್ಗಹಾಗೂ ಸದಸ್ಯರು ಸೇರಿ ಅವರವರ ಸಂಸ್ಥೆಗಳಲ್ಲಿ ಸಹಕಾರ ಗೀತೆ ಹಾಡಿ, ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ.

ದಿನಾಂಕ: 14.11.2025ನೇ ಶುಕ್ರವಾರ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ “ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು” ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಮಂದಾರ್ತಿ ಸೇವಾ ಸಹಕಾರ ಸಂಘ ನಿ., ಮಂದಾರ್ತಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಸಮಾರಂಭದ ಉದ್ಘಾಟನೆಯನ್ನು ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರುಇವರು ನೇರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಕಿರಣ್ ಕುಮಾರ್ ಕೊಡ್ಗಿ, ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ ಇವರು ವಹಿಸಲಿರುವರು. ಮುಖ್ಯಅತಿಥಿಗಳಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಎಚ್.ಧನಂಜಯ ಶೆಟ್ಟಿ, ಅನುವಂಶಿಕ ಆಡಳಿತ ಮೊಕ್ತೇಸರರು, ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ, ಎಚ್.ಗಂಗಾಧರ ಶೆಟ್ಟಿ, ಅಧ್ಯಕ್ಷರು, ಮಂದಾರ್ತಿ ಸೇವಾ ಸಹಕಾರ ಸಂಘ ನಿ., ಮಂದಾರ್ತಿ, ಶ್ರೀಮತಿ.ಕೆ.ಆರ್ ಲಾವಣ್ಯ, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಜೆ.ಸುಧೀರ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕುಂದಾಪುರ ಉಪವಿಭಾಗ ಹಾಗೂ ದಿಕ್ಸೂಚಿ ಭಾಷಣಕಾರರಾಗಿ ಡಾ|ಗಣನಾಥ್ ಶೆಟ್ಟಿ ಎಕ್ಕಾರ್, ಅಧ್ಯಕ್ಷರು, ಡಾ| ಶಿವರಾಮ ಕಾರಂತ ಟ್ರಸ್ಟ್, ಕರ್ನಾಟಕ ಸರಕಾರ ಇವರು ಉಪಸ್ಥಿತರಿರುವರು. ಈ ಸಮಾರಂಭವನ್ನು ಪೂರ್ವಾಹ್ನ 10.30ಕ್ಕೆ ಸಹಕಾರ ಧ್ವಜಾರೋಹಣದೊಂದಿಗೆ ಪ್ರಾರಂಭಿಸಿ ಸಹಕಾರಿಗಳ ಭಾಗವಹಿಸುವಿಕೆಯೊಂದಿಗೆ ಸಹಕಾರ ರಥದ ಉದ್ಘಾಟನೆ ತದನಂತರ ಶ್ರೀ ಚಾಮುಂಡೇಶ್ವರಿ ಸಭಾಂಗಣ, ಶ್ರೀ ದುರ್ಗಾ ಸಹಕಾರ ಸೌಧ, ಮಂದಾರ್ತಿ ಇಲ್ಲಿ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ದಿನಾಂಕ: 15.11.2025ನೇ ಶನಿವಾರ ‘ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ: ಸಂಶೋಧನೆ’ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ” ಕಾರ್ಯಕ್ರಮವನ್ನು ಗಣೇಶ ಮೊಗವೀರ, ಅಧ್ಯಕ್ಷರು, ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು, ಹೆಮ್ಮಾಡಿ, ಕಿರಿಮಂಜೇಶ್ವರ, ಸುಳ್ಸೆ ಇವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ರಾಜೀವ ಎನ್. ಶ್ರೀಯಾನ್, ಅಧ್ಯಕ್ಷರು, ಹೆಮ್ಮಾಡಿ ಮೀನುಗಾರರ ಸಹಕಾರ ಸಂಘ ನಿ., ಹೆಮ್ಮಾಡಿ, ಶ್ರೀ ಸಾಧು ಎಸ್.ಬಿಲ್ಲವ, ಅಧ್ಯಕ್ಷರು, ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ನಿ., ಹೆಮ್ಮಾಡಿ, ಶ್ರೀಮತಿ. ಕೆ.ಆರ್ ಲಾವಣ್ಯ, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಶ್ರೀ ಜೆ.ಸುಧೀರ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕುಂದಾಪುರ ವಿಭಾಗ, ಹಾಗೂ ದಿಕ್ಸೂಚಿ ಭಾಷಣಕಾರರಾಗಿ ಶ್ರೀ ಗಿರೀಶ್ ಎಸ್.ಪಿ, ನ್ಯಾಯವಾದಿಗಳು, ಉಡುಪಿ ಇವರು ಉಪಸ್ಥಿತರಿರುವರು. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿ., ಹೆಮ್ಮಾಡಿ, ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ನಿ., ಹೆಮ್ಮಾಡಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ “ಮತ್ಸ್ಯ ಜ್ಯೋತಿ ಸಭಾಂಗಣ”, ಹೆಮ್ಮಾಡಿ ಇಲ್ಲಿ ಅಪರಾಹ್ನ 3.00 ಗಂಟೆಗೆ ಏರ್ಪಡಿಸಲಾಗಿದೆ.

ದಿನಾಂಕ: 16.11.2025ನೇ ಭಾನುವಾರ“ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕುಗಳು/ ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ, “ಕರಾವಳಿ ಉತ್ಸವ ಮೈದಾನ”, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ, ಸನ್ಮಾನ್ಯ ಶ್ರೀ ಯು.ಟಿ ಖಾದರ್ ಫರೀದ್ ಇವರು ಉದ್ಘಾಟಿಸಲಿದ್ದಾರೆ. ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರಧಾನ, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ಸರ್ಕಾರ ಸನ್ಮಾನ್ಯ ಶ್ರೀ ದಿನೇಶ್ ಗುಂಡುರಾವ್ ಇವರು ನೆರವೇರಿಸಲಿದ್ದು, ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸನ್ಮಾನ್ಯ ಶ್ರೀಮತಿ. ಲಕ್ಷ್ಮೀ ಹೆಬ್ಬಾಳ್ಕರ್, ಮಾನ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ಸರ್ಕಾರ, ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ ಶ್ರೀ.ಜಿ.ಟಿ ದೇವೇಗೌಡ ಇವರು ನೆರವೇರಿಸಲಿದ್ದು, ಮಾನ್ಯ ಶಾಸಕರು ಹಾಗೂ ಮಾಜಿ ಸಹಕಾರ ಸಚಿವರು, ಕರ್ನಾಟಕ ಸರ್ಕಾರ ಸನ್ಮಾನ್ಯ ಶ್ರೀ. ಕೆ.ಎನ್ ರಾಜಣ್ಣ ಇವರು ವಿಶೇಷವಾಗಿ ವಸ್ತು ಪ್ರದರ್ಶನ ಮಳಿಗೆಗಳ ಉದ್ಘಾಟನೆ, ಸಹಕಾರಿ ಧ್ಜಜಾರೋಹಣವನ್ನು ಸನ್ಮಾನ್ಯ ಶ್ರೀ.ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಸಂಸದರು ಮಂಗಳೂರು ಲೋಕಸಭಾ ಕ್ಷೇತ್ರ ಇವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಸನ್ಮಾನ್ಯ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಮೇನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸನ್ಮಾನ್ಯ  ಮಂಜುನಾಥ್ ಭಂಡಾರಿ, ಮಾನ್ಯ ಶಾಸಕರು, ಕರ್ನಾಟಕ ವಿಧಾನ ಪರಿಷತ್, ಶ್ರೀ.ವೇದವ್ಯಾಸ್.ಡಿ.ಕಾಮತ್, ಮಾನ್ಯ ಶಾಸಕರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಸನ್ಮಾನ್ಯ ಡಾ| ಭರತ್ ಶೆಟ್ಟಿ.ವೈ. ಮಾನ್ಯ ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಸನ್ಮಾನ್ಯ ಶ್ರೀ ಯಶ್‍ಪಾಲ್ ಎ. ಸುವರ್ಣ, ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ಉಡುಪಿ, ಅಧ್ಯಕ್ಷರು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು. ಸನ್ಮಾನ್ಯ ಶ್ರೀ ಐವನ್ ಡಿ’ಸೋಜ ಮಾನ್ಯ ಶಾಸಕರು, ಕರ್ನಾಟಕ ವಿಧಾನ ಪರಿಷತ್, ಸನ್ಮಾನ್ಯ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ಮಾನ್ಯ ಶಾಸಕರು, ಕರ್ನಾಟಕ ವಿಧಾನ ಪರಿಷತ್, ಗೌರವ ಉಪಸ್ಥಿತರಾಗಿ ಸನ್ಮಾನ್ಯ ಡಾ. ಸುರೇಂದ್ರ ಬಾಬು, ಮುಖ್ಯ ಮಹಾಪ್ರಬಂಧಕರು ನಬಾರ್ಡ್, ಬೆಂಗಳೂರು ಹಾಗೂ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ. ರವಿರಾಜ್ ಹೆಗ್ಡೆ ಇವರು ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಶ್ರೀ ಎಸ್.ಬಿ.ಶೆಟ್ಟಣ್ಣನವರ್, ಭಾ.ಆ.ಸೇ, ಸರ್ಕಾರದ ಕಾರ್ಯದರ್ಶಿ ಸಹಕಾರ ಇಲಾಖೆ, ಕರ್ನಾಟಕ ಸರ್ಕಾರ, ಶ್ರೀ.ಟಿ.ಎಚ್.ಎಂ ಕುಮಾರ್, ಭಾ.ಆ.ಸೇ, ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ, ಬೆಂಗಳೂರು, ಶ್ರೀ ದರ್ಶನ್ ಎಚ್.ವಿ. ಭಾ.ಆ.ಸೇ, ಮಾನ್ಯ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ, ಶ್ರೀ ಸುಧೀರ್ ಕುಮಾರ್ ರೆಡ್ಡಿ, ಭಾ.ಪೊ.ಸೇ, ಪೋಲಿಸ್ ಆಯುಕ್ತರು, ಮಂಗಳೂರು ಉಪಸ್ಥಿತರಿರುವರು.ಆದರದ ಸ್ವಾಗತ ಕೋರುವವರು ಶ್ರೀ ಶಶಿಕುಮಾರ್ ರೈ ಬಾಲ್ಯೋಟ್ಟು, ಅಧ್ಯಕ್ಷರು, ದ.ಕ ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು, ನಿರ್ದೇಶಕರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ಶ್ರೀ. ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಶ್ರೀ ಕೆ.ಎಸ್. ನವೀನ್, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಶ್ರೀ.ಹೆಚ್. ಬಾಲಶೇಖರ್, ಸಹಕಾರ ಸಂಘಗಳ ಅಪರನಿಬಂಧಕರು(ಪತ್ತು) ಬೆಂಗಳೂರು, ಶ್ರೀ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ಶ್ರೀ ಲಿಂಗರಾಜ್, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ಶ್ರೀ. ಪ್ರಸಾದ್ ರೆಡ್ಡಿ.ಪಿ, ಸಹಕಾರ ಸಂಘಗಳ ಜಂಟಿನಿಬಂಧಕರು, ಮೈಸೂರು ಪ್ರಾಂತ್ಯ, ಮೈಸೂರು, ಶ್ರೀ ರಮೇಶ್ ಹೆಚ್.ಎನ್, ಸಹಕಾರ ಸಂಘಗಳ ಉಪನಿಬಂಧಕರು, ದಕ್ಷಿಣಕನ್ನಡ ಜಿಲ್ಲೆ, ಶ್ರೀಮತಿ.ಲಾವಣ್ಯ. ಕೆ.ಆರ್, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಶ್ರೀ.ಕೆ ಗೋಪಾಲಕೃಷ್ಣ ಭಟ್, ಮುಖ್ಯಕಾರ್ಯನಿರ್ವಹಣಾಧಿಕಾರಿ(ಪ್ರ) ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು ಹಾಗೂ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು.

ದಿನಾಂಕ: 17.11.2025ನೇ ಸೋಮವಾರ “ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ” ಕಾರ್ಯಕ್ರಮವನ್ನುಹಾಗೂ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮವನ್ನು ಶ್ರೀ ಸೂರ್ಯಕಾಂತ್ ಜಯ ಸುವರ್ಣ, ಅಧ್ಯಕ್ಷರು, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿ., ಇವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ.,ಉಡುಪಿ ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ವಹಿಸಲಿದ್ದಾರೆ. ಕೃಷಿ ಪ್ರೋತ್ಸಾಹಧನ ವಿತರಣೆಯನ್ನು ಶ್ರೀ ಸುಧೀರ್ ವೈ, ಅಧ್ಯಕ್ಷರು, ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ಪಡುಬಿದ್ರೆ, ನಿರ್ದೇಶಕರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ.,ಉಡುಪಿ ಇವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶಾಸಕರು, ಕಾಪು ವಿಧಾನ ಸಭಾ ಕ್ಷೇತ್ರ, ಶ್ರೀ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರು, ಕರ್ನಾಟಕ ಸರ್ಕಾರ, ಶ್ರೀಮತಿ ಕೆ.ಆರ್ ಲಾವಣ್ಯ, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ.ಶ್ರೀ. ಜೆ.ಸುಧೀರ್ ಕುಮಾರ್ ಸಹಕಾರ ಸಂಘಗಳ ಸಹಾಯಕನಿಬಂಧಕರು, ಕುಂದಾಪುರ ವಿಭಾಗ, ಕುಂದಾಪುರ, ಶ್ರೀಮತಿ.ಶಶಿಕಲಾ ವೈ, ಅಧ್ಯಕ್ಷರು, ಪಡುಬಿದ್ರಿ ಗ್ರಾಮ ಪಂಚಾಯತ್ ದಿಕ್ಸೂಚಿ ಭಾಷಣಕಾರರಾಗಿ ಶ್ರೀಮತಿ. ಬಿಂದು ಬಿ.ನಾಯರ್, ಹಿರಿಯ ಉಪನ್ಯಾಸಕರು, ಕೆ.ಐ.ಸಿ.ಎಂ, ಮೂಡುಬಿದಿರೆ ಇವರು ಉಪಸ್ಥಿತರಿರುವರು. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ಪಡುಬಿದ್ರೆ ಹಾಗೂ ಸಹಕಾರ ಇಲಾಖೆ,ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿವೈ ಲಕ್ಷ್ಮಣ ಸಭಾಂಗಣ, ಪಡುಬಿದ್ರೆ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ಪಡುಬಿದ್ರೆ ಇಲ್ಲಿ ಪೂರ್ವಾಹ್ನ 9.30ಕ್ಕೆ ಏರ್ಪಡಿಸಲಾಗಿದೆ.

ದಿನಾಂಕ: 18.11.2025ನೇ ಮಂಗಳವಾರ “ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ (ಕರಕುಶಲ, ಕೈಮಗ್ಗ, ಕಾರ್ಮಿಕ, ಮೀನುಗಾರಿಕೆ ಇತ್ಯಾದಿ)” ಕಾರ್ಯಕ್ರಮವನ್ನು ಡಾ| ದೇವಿಪ್ರಸಾದ್ ಶೆಟ್ಟಿ, ಬೆಳಪು ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ಅಧ್ಯಕ್ಷರು, ಬೆಳಪು ಸಹಕಾರಿ ವ್ಯವಸಾಯಿಕ ಸಂಘ ನಿ., ಬೆಳಪು ಇವರು ಉದ್ಘಾಟಿಸಲಿದ್ದು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶ್ರೀಧರ ದೇವಾಡಿಗ, ಚಿಟ್ಪಾಡಿ, ಅಧ್ಯಕ್ಷರು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ನಿ., ಕುಕ್ಕಿಕಟ್ಟೆ ಇವರು ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು,ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಮಾನ್ಯ ಶಾಸಕರು, ಕಾಪು ವಿಧಾನಸಭಾ ಕ್ಷೇತ್ರ, ಶ್ರೀ ಯಶ್‍ಪಾಲ್ ಎ.ಸುವರ್ಣ, ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರಹಾಗೂ ನಿರ್ದೇಶಕರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ,ಶ್ರೀಮತಿ ಕೆ.ಆರ್ ಲಾವಣ್ಯ, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಶ್ರೀ ಜೆ.ಸುಧೀರ್ ಕುಮಾರ್, ಸಹಕಾರ ಸಂಘಗಳ ಸಹಾಯಕನಿಬಂಧಕರು, ಕುಂದಾಪುರ ಉಪವಿಭಾಗ, ಕುಂದಾಪುರ, ಶ್ರೀ ಯತೀಶ್ ಕುಮಾರ್, ಅಧ್ಯಕ್ಷರು, ಅಲೆವೂರು ಗ್ರಾಮ ಪಂಚಾಯತ್, ಶ್ರೀ ಅಲೆವೂರು ಹರೀಶ್ ಕಿಣಿ, ನಿರ್ದೇಶಕರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಅಧ್ಯಕ್ಷರು, ಅಲೆವೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ., ಅಲೆವೂರು, ದಿಕ್ಸೂಚಿ ಭಾಷಣಕಾರರಾಗಿ ಶ್ರೀಮತಿ. ಮಮತಾ ರೈ, ಕದಿಕೆ ಟ್ರಸ್ಟ್, ಉಡುಪಿ ಇವರು ಉಪಸ್ಥಿತರಿರುವರು. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ನಿ., ಕೊರಂಗ್ರಪಾಡಿ, ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ “ಸಮೃದ್ಧಿ ಸಹಕಾರ ಸೌಧ” ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ನಿ., ಕೊರಂಗ್ರಪಾಡಿ ಇಲ್ಲಿ ಅಪರಾಹ್ನ 3.00ಕ್ಕೆ ಏರ್ಪಡಿಸಲಾಗಿದೆ.

ದಿನಾಂಕ: 19.11.2025ನೇ ಬುಧವಾರ “ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್‍ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ” ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರ ಸಂಘ ನಿ., ಹೆಬ್ರಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇವರು ನೇರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ವಿ. ಸುನೀಲ್ ಕುಮಾರ್, ಮಾನ್ಯ ಶಾಸಕರು, ವಿಧಾನಸಭಾ ಕ್ಷೇತ್ರ, ಕಾರ್ಕಳ ಇವರು ವಹಿಸಲಿದ್ದಾರೆ.ಮುಖ್ಯಅತಿಥಿಗಳಾಗಿ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಶ್ರೀ ರವಿರಾಜ್ ಹೆಗ್ಡೆ, ಅಧ್ಯಕ್ಷರು, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ಶ್ರೀ ಜಯಪ್ರಕಾಶ್ ಹೆಗ್ಡೆ, ಮಾಜಿ ಸಂಸದರು ಹಾಗೂ ಮಾಜಿ ಸಚಿವರು ಕರ್ನಾಟಕ ಸರ್ಕಾರ, ಶ್ರೀ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಅಧ್ಯಕ್ಷರು, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್, ಮುನಿಯಾಲು, ಶ್ರೀ ನವೀನ್ ಕೆ. ಅಡ್ಯಂತಾಯ, ಅಧ್ಯಕ್ಷರು, ಹೆಬ್ರಿ ವ್ಯವಸಾಯ ಸೇವಾ ಸಹಕಾರ ಸಂಘ ನಿ., ಹೆಬ್ರಿ, ಶ್ರೀಮತಿ ಕೆ.ಆರ್ ಲಾವಣ್ಯ, ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಶ್ರೀ ಜೆ.ಸುಧೀರ್ ಕುಮಾರ್, ಸಹಕಾರ ಸಂಘಗಳ ಸಹಾಯಕನಿಬಂಧಕರು, ಕುಂದಾಪುರ ವಿಭಾಗ, ಕುಂದಾಪುರ. ಶ್ರೀ ತಾರಾನಾಥ ಬಂಗೇರ, ಅಧ್ಯಕ್ಷರು, ಗ್ರಾಮ ಪಂಚಾಯತ್ ಹೆಬ್ರಿ. ಶ್ರೀ ದಿನೇಶ ಕುಮಾರ್ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಚಾರಾ ಹಾಗೂ ದಿಕ್ಸೂಚಿ ಭಾಷಣಕಾರರಾಗಿ ಶ್ರೀ ರಾಜೇಂದ್ರ ಭಟ್, ನಿವೃತ್ತ ಉಪನ್ಯಾಸಕರು,ಇವರು ಉಪಸ್ಥಿತರಿರುವರು.ಈ ಕಾರ್ಯಕ್ರಮವನ್ನು ಶ್ರೀಮತಿ ಶೀಲಾ ಸುಬೋದ್ ಬಲ್ಲಾಳ್ ಸಭಾಭವನ (ಬಂಟರ ಭವನ) ಹೆಬ್ರಿಇಲ್ಲಿ ಬೆಳಿಗ್ಗೆ ಗಂಟೆ 10.30ಕ್ಕೆ ಏರ್ಪಡಿಸಲಾಗಿದೆ.

ದಿನಾಂಕ: 20.11.2025ನೇ ಗುರುವಾರ “ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು”ಮತ್ತು ಸಪ್ತಾಹದ ಸಮಾರೋಪ ಸಮಾರಂಭವನ್ನುಶ್ರೀ ಗುರುರಾಜ್ ಗಂಟಿಹೊಳೆ, ಮಾನ್ಯ ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ ಇವರು ಉದ್ಘಾಟಿಸಲಿದ್ದು, ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀಮತಿ. ಅನ್ನಪೂರ್ಣ ಉಡುಪ, ಅಧ್ಯಕ್ಷರು, ಮಹಿಳಾ ವಿವಿದೋದ್ಧೇಶ ಸಹಕಾರಿ ಸಂಘ ನಿ., ಕಿರಿಮಂಜೇಶ್ವರ, ಶ್ರೀ ಎಸ್. ಪ್ರಕಾಂಶ್ಚಂದ್ರ ಶೆಟ್ಟಿ, ಅಧ್ಯಕ್ಷರು, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಶ್ರೀ ಎಸ್.ರಾಜು ಪೂಜಾರಿ, ಸಹಕಾರಿ ಧುರೀಣರು, ಉಡುಪಿ ಜಿಲ್ಲೆ, ಶ್ರೀಮತಿ ಕೆ.ಆರ್ ಲಾವಣ್ಯ ಸಹಕಾರ ಸಂಘಗಳ ಉಪನಿಬಂಧಕರು, ಉಡುಪಿ ಜಿಲ್ಲೆ, ಶ್ರೀ ಜೆ.ಸುಧೀರ್ ಕುಮಾರ್, ಸಹಕಾರ ಸಂಘಗಳ ಸಹಾಯಕನಿಬಂಧಕರು, ಕುಂದಾಪುರ ವಿಭಾಗ, ಕುಂದಾಪುರ, ಶ್ರೀ ಶೇಖರ ಖಾರ್ವಿ, ಅಧ್ಯಕ್ಷರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ, ಶ್ರೀಮತಿ ಗೌರಿ ದೇವಾಡಿಗ, ಮಾಜಿ ಸದಸ್ಯರು, ಜಿಲ್ಲಾ ಪಂಚಾಯತ್, ಶ್ರೀಮತಿ. ಶ್ಯಾಮಲ ಕುಂದರ್, ಮಾಜಿ ಸದಸ್ಯರು, ತಾಲೂಕು ಪಂಚಾಯತ್, ದಿಕ್ಸೂಚಿ ಭಾಷಣಕಾರರಾಗಿ ಶ್ರೀ ಸಂತೋಷ್ ಶೆಟ್ಟಿ, ಸಹಾಯಕ ಪ್ರಾಧ್ಯಾಪಕರು, ಶ್ರೀದವಳ ಕಾಲೇಜು ಮೂಡುಬಿದಿರೆ ಇವರು ಉಪಸ್ಥಿತರಿರುವರು. ಈ ಸಮಾರಂಭವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಮಹಿಳಾ ವಿವಿದೋದ್ಧೇಶ ಸಹಕಾರ ಸಂಘ ನಿ., ಕಿರಿಮಂಜೇಶ್ವರ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ“ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರ, ನಾಗೂರು ಇಲ್ಲಿ ಪೂರ್ವಾಹ್ನ 10.30ಕ್ಕೆ ಏರ್ಪಡಿಸಲಾಗಿದೆ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!