spot_img
Tuesday, March 10, 2026
spot_img

ತ್ರಿವಿಧ ಜಿಗಿತದಲ್ಲಿ ದಾಖಲೆ ನಿರ್ಮಿಸಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ  ಶ್ರೀ ರಕ್ಷಾ 17 ರ ವಯೋಮಾನದ ಬಾಲಕಿಯರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜಯಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಈ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿನ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.

ಜನತಾ ಪದವಿಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!