spot_img
Tuesday, March 10, 2026
spot_img

72ನೇ ಅಖಿಲ ಭಾರತ ಸಹಕಾರ ಸಪ್ತಾಹ :ನವೆಂಬರ್ -16ರಂದು ಮಂಗಳೂರಿನಲ್ಲಿ ‘ಸಹಕಾರ ಮಾಣಿಕ್ಯ ಪ್ರಶಸ್ತಿ ‘ ಮತ್ತು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ “ಸಹಕಾರ ಮಾಣಿಕ್ಯ” ಎಂಬ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ  72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಗಳನ್ನು “ಸಹಕಾರ ಮಾಣಿಕ್ಯ ಪ್ರಶಸ್ತಿ”ಗೆ  ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಬಜ್ಜೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮಂಗಳೂರು , ಉಡುಪಿ ಜಿಲ್ಲೆಯಿಂದ ಕೋಟ ಸಹಕಾರಿ ವ್ಯವಸಾಯಿಕ ಸಂಘ ನಿ.-ಉಡುಪಿ, ಹಾಗೂ ಕ್ರೆಡಿಟ್ ಕೋ-ಅಪರೇಟಿವ್ ಸಹಕಾರ ಸಂಘದಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಉಡುಪಿ ಆಯ್ಕೆಯಾಗಿದೆ.”ಸಹಕಾರ ಮಾಣಿಕ್ಯ ಪ್ರಶಸ್ತಿ”ಯ ಜೊತೆಗೆ 5 ಗ್ರಾಂ ಚಿನ್ನದ ಪದಕ. ರೂ.10,000/- ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದೆಂದು ಡಾ. ಎಂ. ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು , ಉತ್ತಮ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ.-ಮಂಗಳೂರು , ಉಡುಪಿ ಜಿಲ್ಲೆಯಿಂದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ.-ಉಡುಪಿ, ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಟ್ಲ ಪಿರ್ಕ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ವಿಟ್ಲ, ಉಡುಪಿ ಜಿಲ್ಲೆಯಿಂದ ಕಾಪು ಕ್ಷೇತ್ರ ಸ್ತ್ರೀಶಕ್ತಿ ಸ್ವಸಹಾಯ ಗುಂಪು ವಿವಿಧೋದ್ದೇಶ ಸಹಕಾರಿ ಸಂಘ  ನಿ., ಉತ್ತಮ ಮೀನುಗಾರಿಕಾ ಸಹಕಾರಿ ಸಂಘ ಪ್ರಶಸ್ತಿಗೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಉಳ್ಳಾಲ ಮೀನುಗಾರರ ಮಹಿಳಾ ಸೇವಾ ಸಹಕಾರಿ ಸಂಘ ಉಳ್ಳಾಲ -ಮಂಗಳೂರು , ಉಡುಪಿ ಜಿಲ್ಲೆಯಿಂದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾ.ಸ.ಸಂಘ ಆಯ್ಕೆಗೊಂಡಿದೆ.

ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮಾಜ ಸೇವಾ ಸಹಕಾರಿ ಸಂಘ ನಿ. -ಬಂಟ್ವಾಳ ಹಾಗೂ ಪ್ರಿಯದರ್ಶಿನಿ ಸಹಕಾರ ಸಂಘ ನಿ., ಹಳೆಯಂಗಡಿ -ಮಂಗಳೂರು, ಉಡುಪಿ ಜಿಲ್ಲೆಯಿಂದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಕುಂದಾಪುರ ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ., ಪೆರ್ಡೂರು -ಉಡುಪಿ, ಉತ್ತಮ ಆಡಳಿತಾತ್ಮಕ ಸಹಕಾರ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮಂಗಳೂರು , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. -ಮಂಗಳೂರು ,ಉಡುಪಿ ಜಿಲ್ಲೆಯಿಂದ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘ ನಿ. -ಕುಂದಾಪುರ ಆಯ್ಕೆಗೊಂಡಿದೆ.

ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘ, ದ.ಕ ಜಿಲ್ಲೆ , ಉತ್ತಮ ಟಿ .ಎ.ಪಿ.ಸಿ.ಎಂ.ಎಸ್ ಪ್ರಶಸ್ತಿಗೆ ಮಂಗಳೂರು ಟಿ.ಎ.ಪಿ.ಸಿ.ಎಂ.ಎಸ್  ಆಯ್ಕೆಗೊಂಡರೆ, ವಜ್ರ ಮಹೋತ್ಸವ ಪೂರೈಸಿದ ಸಹಕಾರಿ ಸಂಘ- ವಿಶೇಷ ಪ್ರಶಸ್ತಿಗೆ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಅಪರೇಟಿವ್ ಸೊಸೈಟಿ ಲಿ. -ಮಂಗಳೂರು ,ಸುವರ್ಣ ಮಹೋತ್ಸವ ಪೂರೈಸಿದ ಸಹಕಾರಿ ಸಂಘ – ವಿಶೇಷ ಪ್ರಶಸ್ತಿ : ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿ, ಮಂಗಳೂರು , ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ -ಬೆಳ್ತಂಗಡಿ ತಾಲೂಕು , ಉಡುಪಿ ಜಿಲ್ಲೆಯಿಂದ ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘ ನಿ. -ಕುಂದಾಪುರ ಆಯ್ಕೆಗೊಂಡಿದೆ. ಉತ್ತಮ ನವೋದಯ ಸ್ವಸಹಾಯ ಗುಂಪು ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಖ್ಯಪ್ರಾಣ ನವೋದಯ ಸ್ವಸಹಾಯ ಗುಂಪು , ಮಂಗಳೂರು , ಉಡುಪಿ ಜಿಲ್ಲೆಯಿಂದ ನಿಕೇತ ನವೋದಯ ಸ್ವಸಹಾಯ ಗುಂಪು- ಬಜಗೋಳಿ -ಕಾರ್ಕಳ ಆಯ್ಕೆಗೊಂಡಿದೆ.

ಮೂಡಬಿದ್ರಿ ಸಹಕಾರ ತರಬೇತಿ ಕೇಂದ್ರದ ಮೊದಲ ರ್ಯಾಂಕ್ ವಿಜೇತರಾದ ಚೇತನಾ ಬಿ.ಎಸ್. ಹಾಗೂ ಪ್ರತೀಕ್ಷಾ ಬಲ್ಪಂತಿ ಇವರನ್ನು ಮತ್ತು ‌ಪತ್ರಿಕಾ ರಂಗದ ಪ್ರಶಸ್ತಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ
ಇವರು ಅಯ್ಕೆಗೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!