spot_img
Tuesday, May 12, 2026
spot_img

ಕುಂದಾಪುರ: ದೈಹಿಕ ಶಿಕ್ಷಣ ಶಿಕ್ಷಕರಿಗೆ ಕಾರ್ಯಾಗಾರ 

ಕುಂದಾಪುರ, ಡಿ.5: CSSTE ಯೋಜನೆಯಡಿಯಲ್ಲಿ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರವು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಸಂಸ್ಥೆಯ ಕಾರ್ಯದರ್ಶಿಯವರಾದ ಕೆ ರಾಧಾಕೃಷ್ಣ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಅಶೋಕ್ ಕಾಮತ್‌ರವರು ಪ್ರಾಸ್ತಾವಿಕ ಮಾತನಾಡಿದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಗೀತ ಶಿಕ್ಷಕಿಯರಾz ರಮಣಿ ಹಾಗೂ ಉಷಾ ಪ್ರಾರ್ಥನೆಯನ್ನು ನೆರವೇರಿಸಿದರು. ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ವಂದಿಸಿದರು.

ಈ ಮಾಹಿತಿ ಕಾರ್ಯಗಾರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಾದ್ ಅಹಮದ್, ಸುಧಾಕರ ಶೆಟ್ಟಿ, ಸತ್ಯಾನಂದ ಸಾಲಿನ್ಸ್ ಹಾಗೂ ಅರುಣಕುಮಾರ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!