spot_img
Monday, March 16, 2026
spot_img

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ‘ಉತ್ತಮ ಪತ್ತಿನ ಸಹಕಾರ ಸಂಘ’ ಪ್ರಶಸ್ತಿ

ಜೋನ್ಸನ್ ಡಿ ಅಲ್ಮೇಡಾ, ಅಧ್ಯಕ್ಷರು

ಜನಪ್ರತಿನಿಧಿ ವಾರ್ತೆ] ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಸಲುವಾಗಿ 2025ನೇ ಸಹಕಾರ ಸಪ್ತಾಹದ ಸಂಭ್ರಮ ಆಚರಣೆ ಸಂದರ್ಭದಲ್ಲಿ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಕುಂದಾಪುರದಲ್ಲಿ ಪ್ರಧಾನ ಕಛೇರಿ ಹೊಂದಿರುವ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆಯ್ಕೆಯಾಗಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಡೆಯಲಿದೆ.

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 33 ವರ್ಷಗಳ ವಿಶ್ವಾಸಾರ್ಹ ಸೇವೆಯಲ್ಲಿ ದಾಪುಗಾಲಿಡುತ್ತಿದೆ. ಕುಂದಾಪುರದಲ್ಲಿ ಪ್ರಧಾನ ಕಛೇರಿ ಹೊಂದಿ, ಕುಂದಾಪುರ, ಬೈಂದೂರು, ಬಸ್ರೂರು, ಪಡುಕೋಣೆ, ಪಿಯೂಸ್ ನಗರ ಕೋಟೇಶ್ವರ, ಗಂಗೊಳ್ಳಿ, ಸಂತೆಕಟ್ಟೆ, ಶಿರ್ವ, ತಲ್ಲೂರು, ಬ್ರಹ್ಮಾವರ, ಉಡುಪಿ, ಕಾರ್ಕಳದಲ್ಲಿ ಶಾಖೆಗಳನ್ನು ಹೊಂದಿದೆ.

1ಸಾವಿರ ಕೋಟಿ ದಾಟಿದ ವ್ಯವಹಾರ ಸಾಧನೆ ಮಾಡಿರುವ ಸಂಸ್ಥೆ ಜೋನ್ಸನ್ ಡಿ ಅಲ್ಮೇಡಾ ಅವರ ಅಧ್ಯಕ್ಷತೆಯಲ್ಲಿ ಯಶಸ್ಸಿನ ದಾಪುಗಾಲಿಡುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!