spot_img
Monday, March 16, 2026
spot_img

ಕುಂದಾಪುರ: ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಉಡುಪಿ ಜಿಲ್ಲೆಯ ಉತ್ತಮ ಪತ್ತಿನ ಸಹಕಾರ ಸಂಘ ಪ್ರಶಸ್ತಿ ಪ್ರದಾನ

ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರ ಸಂಘಗಳನ್ನು ಗುರುತಿಸುವ ಸಲುವಾಗಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮಾಚರಣೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಪ್ರಧಾನ ಕಛೇರಿ ಹೊಂದಿರುವ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.,ಗೆ ಉತ್ತಮ ಪತ್ತಿನ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.

ನವೆಂಬರ್ 16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಸಂಘದ ಅಧ್ಯಕ್ಷರಾದ ಜೋನ್ಸನ್ ಡಿ‌ಅಲ್ಮೇಡಾ ಅವರು ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಸಭಾದ್ಯಕ್ಷರಾದ ಯು.ಟಿ.ಖಾದರ್ ಫರೀದ್, ಸಹಕಾರ ಮಹಾಮಂಡಲದ ಅಧ್ಯಕ್ಷರು, ಶಾಸಕರಾದ ಜಿ.ಟಿ ದೇವೆಗೌಡ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರಾದ ವೇದವ್ಯಾಸ ಡಿ.ಕಾಮತ್, ಯಶ್‌ಪಾಲ್ ಸುವರ್ಣ, ಐವನ್ ಡಿಸೋಜ, ಸಹಕಾರ ಸಂಘಗಳ ನಿಬಂಧಕರಾದ ಟಿ.ಎಚ್.ಎಂ ಕುಮಾರ್ ಮೊದಲಾದ ಸಹಕಾರ ಧುರೀಣರು ಉಪಸ್ಥಿತರಿದ್ದರು.

ಸುದೀರ್ಘ 33 ವರ್ಷಗಳ ವಿಶ್ವಾಸಾರ್ಹ ಸೇವೆಯಲ್ಲಿ ಮುನ್ನೆಡೆಯುತ್ತಿರುವ ರೋಜರಿ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ 12 ಶಾಖೆಗಳನ್ನು ಹೊಂದಿದ್ದು, ವ್ಯವಹಾರದಲ್ಲಿ ಉತ್ತಮ ಸಾಧನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!