spot_img
Monday, December 15, 2025
spot_img

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಉತ್ತಮ ಪತ್ತಿನ ಸಹಕಾರ ಸಂಘ ಪ್ರಶಸ್ತಿ ಪ್ರದಾನ

ಜನಪ್ರತಿನಿಧಿ ವಾರ್ತೆ] ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಸಲುವಾಗಿ 2025 ನೇ ಸಹಕಾರ ಸಪ್ತಾಹದ ಸಂಭ್ರಮ ಆಚರಣೆ ಸಂದರ್ಭದಲ್ಲಿ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಆಯ್ಕೆಯಾಗಿದೆ.

ನವೆಂಬರ್ 16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ರಾಜೀವ ಶ್ರೀಯಾನ್ ಗುಜ್ಜಾಡಿ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾ ಸಭಾದ್ಯಕ್ಷರಾದ ಯು.ಟಿ.ಖಾದರ್ ಫರೀದ್, ಸಹಕಾರ ಮಹಾಮಂಡಲದ ಅಧ್ಯಕ್ಷರು, ಶಾಸಕರಾದ ಜಿ.ಟಿ ದೇವೆಗೌಡ, ಶಾಸಕರಾದ ವೇದವ್ಯಾಸ ಡಿ.ಕಾಮತ್, ಯಶ್‌ಪಾಲ್ ಸುವರ್ಣ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಸಹಕಾರ ಸಂಘಗಳ ನಿಬಂಧಕರಾದ ಟಿ.ಎಚ್.ಎಂ ಕುಮಾರ್ ಮೊದಲಾದ ಸಹಕಾರ ಧುರೀಣರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಹಟ್ಟಿಯಂಗಡಿ ಉಪಸ್ಥಿತರಿದ್ದರು.

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಕಳೆದ ೨೫ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಹೆಮ್ಮಾಡಿಯಲ್ಲಿ ಪ್ರಧಾನ ಕಛೇರಿ ಹೊಂದಿದ್ದು, ವಂಡ್ಸೆ, ಶಂಕರನಾರಾಯಣ, ಕುಂದಾಪುರ, ಬೈಂದೂರಿನಲ್ಲಿ ಶಾಖೆಗಳನ್ನು ಹೊಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!