spot_img
Wednesday, March 4, 2026
spot_img

ವಿ‌ಎಂಕೆಯಲ್ಲಿ ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

kundapura: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ವಿಜಯ ಮಕ್ಕಳಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ ಇಲ್ಲಿ ನ.19ರಂದು ನಡೆಯಿತು. ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ವಿದ್ಯಾರ್ಥಿಸಮೂಹದೊಂದಿಗೆ ಪ್ರತಿಭಾ ಕಾರಂಜಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಮಕ್ಕಳಕೂಟ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಸುಭಾಷ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ವಂಡ್ಸೆ ಪಂಚಾಯತ್ ಸದಸ್ಯರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ಶುಭ ಹಾರೈಸಿದರು. ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ಎಂ ನಾಗರಾಜ್ ಶೆಟ್ಟಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಶಾಲಾ ಪ್ರಾಂಶುಪಾಲರಾದ ದೀಪಿಕಾ ಸುಭಾಷ್ ಶೆಟ್ಟಿ ಸ್ವಾಗತಿಸಿ, ತೀರ್ಪುಗಾರರನ್ನು ಗೌರವಿಸಿದರು. ಪ್ರತಿಭಾ ಕಾರಂಜಿಯ ಬೈಂದೂರು ವಲಯದ ನೋಡಲ್ ಅಧಿಕಾರಿ ಸತ್ಯನಾ ಕೊಡೇರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಣ ಸಂಯೋಜಕರಾದ ವೆಂಕಪ್ಪ ಉಪ್ಪಾರ್ ಶುಭ ಹಾರೈಸಿದರು. ವೇದಿಕೆಯಲ್ಲಿ ಕರ್ಕುಂಜೆ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ರವಿಚಂದ್ರ ಮತ್ತು ಕೊಲ್ಲೂರು ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಕ್ಲಸ್ಟರ್ ವ್ಯಾಪ್ತಿಯ 15 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ನೆರವೇರಿಸಿದರು . ಶಾಲಾ ವಿದ್ಯಾರ್ಥಿನಿ ಕೃತಿ ವಂದಿಸಿದರು, ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!