spot_img
Wednesday, March 4, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ : ನವೀಕೃತ ರಂಗಮಂದಿರದ ಉದ್ಘಾಟನೆ

ಕುಂದಾಪುರ: “ಗುಣಮಟ್ಟದ ಶಿಕ್ಷಣಕ್ಕಾಗಿ ಹೆಸಕುತ್ತೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮಾಡಿರುವ ವ್ಯವಸ್ಥೆಗಳು ಶ್ಲಾಘನೀಯ. ನಿರಂತರ ಪ್ರಯೋಗಶೀಲತೆಯಿಂದ ಹೊಸತನದ ಯೋಜನೆಗಳನ್ನು ರೂಪಿಸುತ್ತಿರುವುದು ಇತರೆ ಶಾಲೆಗಳಿಗೆ ಮಾದರಿ ” ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ ಕುಮಾರ್ ಕೊಡ್ಗಿ ನುಡಿದರು.

ಅವರು ಹೆಸಕುತ್ತೂರು ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ ನವೀಕರಣಗೊಂಡ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಮಕ್ಕಳಲ್ಲಿ ಶಿಸ್ತು, ದೇಶಪ್ರೇಮ ಬೆಳೆಸಲು ಮಕ್ಕಳನ್ನೇ ಕೇಂದ್ರವಾಗಿಸಿಕೊಂಡು ನಡೆಸುವ ಮಕ್ಕಳ ಹಬ್ಬಗಳು ಪೂರಕ. ಹೆಸಕುತ್ತೂರು ಶಾಲೆ ಗುಣಮಟ್ಟದ ಶಿಕ್ಷಣದಲ್ಲಿ ನಡೆಸುತ್ತಿರುವ ಪ್ರಯತ್ನಗಳು ಅಭಿನಂದನೀಯ” ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಸ್ತಿ ಪುರಸ್ಕೃತ ನಿಕಟಪೂರ್ವ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯರನ್ನು ಗೌರವಿಸಲಾಯಿತು.

ಹಾಗೆಯೇ ಪೋಷಕರ ಸನ್ಮಾನ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಪೋಷಕರನ್ನು ಅವರ ಮಕ್ಕಳೊಡನೆ ಗೌರವಿಸಲಾಯಿತು.

ಶಾಸಕರಾದ ಕಿರಣಕುಮಾರ ಕೊಡ್ಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕರಾದ ಉಮಾ ಎಲ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಪಲ್ಲವಿ ಕುಲಾಲ, ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಕೆ ಎನ್, ಉದ್ಯಮಿಗಳಾದ ಗಣೇಶ್ ಪ್ರಸಾದ್ ಕಾಂಚನ್, ಉಡುಪಿ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ನಾಯ್ಕ್, ಕುಂದಾಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಕುಂದಾಪುರ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಹಾಲಾಡಿ ವ್ರತ್ತದ ಶಿಕ್ಷಣ ಸಂಯೋಜಕರಾದ ಶೇಖರ್ ಯು, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯಾ, ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ವಸಂತ ಬಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧಾಕರ ಕುಲಾಲ, ಶಾಲಾ ಸಹಶಿಕ್ಷಕರಾದ ಸಂಜೀವ ಎಂ, ರವೀಂದ್ರ ನಾಯಕ್, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರಾ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹ ಶಿಕ್ಷಕಿ ವಿಜಯಾ ಆರ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಹ ಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸಹ ಶಿಕ್ಷಕ ವಿಜಯ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!