spot_img
Wednesday, March 4, 2026
spot_img

ತೋಟಬೈಲು ರಸ್ತೆಗೆ ಮತ್ತೆ ತಡೆಯೊಡ್ಡಿದ ಖಾಸಗಿ ವ್ಯಕ್ತಿ: ಹಟ್ಟಿಯಂಗಡಿ ಗ್ರಾಮ ಪಂಚಾಯತಿಯಿಂದ ತೆರವು

kundapura: ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಗ್ರಾಮದ ತೋಟಬೈಲು ಪ್ರದೇಶಕ್ಕೆ ಹೋಗುವ ಸಾರ್ವಜನಿಕ ರಸ್ತೆಗೆ ಸ್ಥಳೀಯ ಖಾಸಗಿ ವ್ಯಕ್ತಿಯೊಬ್ಬರು ಪದೆ ಪದೇ ಅಡ್ಡಿ ಮಾಡುತ್ತಿದ್ದು, ಆಗಸ್ಟ್ ತಿಂಗಳಲ್ಲಿ ಇಡೀ ಗ್ರಾಮ ಪಂಚಾಯತ್ ಆಡಳಿತವೇ ಬಂದು ತೆರವುಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಿತ್ತು. ಮತ್ತೆ ಆ ವ್ಯಕ್ತಿ ರಸ್ತೆಗೆ ಎರಡು ಕಡೆ ಕಲ್ಲು ಹಾಕಿ ಸಂಚಾರಕ್ಕೆ ಅಡ್ಡಿ ಪಡಿಸಿದ್ದು, ಬುಧವಾರ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಪೊಲೀಸ್ ಬಂದೋಬಸ್ತ್‌ನಲ್ಲಿ ರಸ್ತೆಗೆ ಮಾಡಿರುವ ಅಡ್ಡಿಯನ್ನು ತೆರವು ಮಾಡಿ ಸಂಚಾರಕ್ಕೆ ಮುಕ್ತಗೊಳಿಸಿದೆ.

ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಗ್ರಾಮದ ತೋಟಬೈಲು ಪ್ರದೇಶಕ್ಕೆ ಹೋಗುವ ರಸ್ತೆ ಅನಾದಿ ಕಾಲದಿಂದಲೂ ಇತ್ತು. ಆದರೆ ಪಕ್ಕದ ಜಾಗ ಖಾಸಗಿ ವ್ಯಕ್ತಿಗಳು ಅಕ್ರಮ ಸಕ್ರಮದಲ್ಲಿ ಮಂಜೂರಾಗುವಾಗ ರಸ್ತೆಯ ಮಾರ್ಜಿನ್ ಬಿಟ್ಟು ಮಂಜೂರಾಗಿತ್ತು. ಅದಾಗಿ 20 ವರ್ಷಗಳ ನಂತರ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರು. ಗ್ರಾಮ ಪಂಚಾಯತ್ ತಾನು ಅಭಿವೃದ್ಧಿ ಪಡಿಸಿದ ರಸ್ತೆಯನ್ನು ತೆರವುಗೊಳಿಸಿತು. ಆದರೂ ಒತ್ತುವರಿ ಮುಂದುವರಿದಿತ್ತು. 2020 ರಲ್ಲಿ ಕಂದಾಯ ಇಲಾಖೆಯು ತೆರವು ಮಾಡಿತ್ತು. ಗ್ರಾಮ ಪಂಚಾಯತ್ ಅದನ್ನು ಮತ್ತೆ ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ಬಿಟ್ಟು ಕೊಟ್ಟಿತ್ತು.

ತೋಟಬೈಲು ಪ್ರದೇಶ, ಗಾಣಿಗರಕೇರಿ, ಪರಿಸರದಲ್ಲಿ ೩೫ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮ ಪಂಚಾಯತ್ ಈ ರಸ್ತೆಯನ್ನು ಹಲವು ಬಾರಿ ಅಭಿವೃದ್ಧಿ ಪಡಿಸಿತ್ತು. ಈ ಭಾಗದ ಜನರು, ವಿದ್ಯಾರ್ಥಿಗಳು, ಕೃಷಿಕರು, ಭತ್ತದ ಬೆಳೆಗಾರರು ಈ ರಸ್ತೆಯ ಮೂಲಕವೇ ಮುಖ್ಯರಸ್ತೆಗೆ ಬರಬೇಕು

ಕಳೆದ ಆಗಸ್ಟ್ ತಿಂಗಳಲ್ಲಿ ಪುನಃ ರಸ್ತೆಯನ್ನು ಬಂದ್ ಮಾಡಿ ಒತ್ತುವರಿ ಮಾಡಿಕೊಂಡಿದ್ದು, ಗ್ರಾಮ ಪಂಚಾಯತ್‌ಗೆ ದೂರು ಹೋಗುತ್ತಿದ್ದಂತೆ ಗ್ರಾಮ ಪಂಚಾಯತ್‌ನ ಎಲ್ಲಾ 14 ಜನ ಸದಸ್ಯರು ಒಟ್ಟಾಗಿ ಸಭೆ ನಡೆಸಿ ಕೆಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ಮನಗಂಡು ತನಗಿರುವ ಶಾಸನಬದ್ಧ ಅಧಿಕಾರವನ್ನು ತಿಳಿದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಹೋಗಿ ರಸ್ತೆ ತಡೆಯನ್ನು ತೆರವುಗೊಳಿಸಿದರು. ಆ ಸಂದರ್ಭ ಆ ವ್ಯಕ್ತಿಯ ಮೇಲೆ ಪ್ರಕರಣ ಕೂಡಾ ದಾಖಲಾಗಿತ್ತು. ಆದರೂ ಕೂಡಾ ಮತ್ತೆ ಸಾರ್ವಜನಿಕ ರಸ್ತೆಗೆ ಅಡ್ಡಿ ಮಾಡಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರತ್ನ ದೇವಾಡಿಗ, ಉಪಾಧ್ಯಕ್ಷರಾದ ಪ್ರತಾಪ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಘಾಟೆಕರ್, ಗ್ರಾಮ ಪಂಚಾಯತಿ ಸದಸ್ಯರಾದ ರಾಜೀವ ಶೆಟ್ಟಿ, ವಿಠ್ಠಲ ಶೆಟ್ಟಿ, ಚಂದ್ರ ಮೊಗವೀರ, ಮಂಜುನಾಥ ಜಿ., ಸಂಧ್ಯಾ ಎಸ್.ಶೆಟ್ಟಿ, ಅಮೃತ ಪಿ.ಭಂಡಾರಿ, ರವಿ ಗಾಣಿಗ, ಶಶಿಕುಮಾರ, ದೀಪ, ಸಾಧು, ಲೀಲಾವತಿ ಗಾಣಿಗ, ವಿದ್ಯಾಶ್ರೀ ಮೊಗವೀರ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಾಶ್, ಪಂಚಾಯತ್ ಸಿಬ್ಬಂದಿ ಯೋಗೀಶ್ ಉಪಸ್ಥಿತರಿದ್ದರು.

ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನಾಸೀರ್ ಹುಸೇನ್ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವು ಮಾಡಲಾಯಿತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!